ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಬೇಕು, ಉತ್ತಮ ಸಂಬಳ ಪಡೆಯುವ ಹುದ್ದೆ ಪಡೆದು ಜೀವನದಲ್ಲಿ ಸೆಟಲ್ ಆಗಬೇಕು ಎನ್ನುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಹೌದು, ಪಶ್ಚಿಮ ರೈಲ್ವೆಯಲ್ಲಿ ಖಾಲಿ ಇರುವ 2,865 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳನ್ನು (Western Railway Recruitment 2025) ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಪಶ್ಚಿಮ ರೈಲ್ವೆ
ಒಟ್ಟು ಹುದ್ದೆ: 2,865
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆ ಆರಂಭ: ಆಗಸ್ಟ್ 30
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 29
ಎಸ್ಸೆಸ್ಸೆಲ್ಸಿ, ಪಿಯುಸಿ ಅಥವಾ ಐಟಿಐ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರು 24 ವರ್ಷದೊಳಗಿನವರಾಗಿರಬೇಕು ಎಂದು ತಿಳಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಹುದ್ದೆಗಳ ಮೀಸಲಾತಿ ಪಟ್ಟಿ
ಸಾಮಾನ್ಯ ವರ್ಗ – 1150 ಹುದ್ದೆ
ಪರಿಶಿಷ್ಟ ಜಾತಿ (ಎಸ್ ಸಿ) – 433 ಹುದ್ದೆ
ಪರಿಶಿಷ್ಟ ಪಂಗಡ (ಎಸ್ ಟಿ) – 215 ಹುದ್ದೆ
ಇತರೆ ಹಿಂದುಳಿದ ವರ್ಗಗಳು (ಒಬಿಸಿ) – 778 ಹುದ್ದೆ
ಆರ್ಥಿಕವಾಗಿ ದುರ್ಬಲ ವಿಭಾಗ (EWS) – 289 ಹುದ್ದೆ
ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ಇರುವುದಿಲ್ಲ. 10 ಮತ್ತು 12 ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮಾತ್ರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಂದರೆ, ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ ಮತ್ತು ಅದರ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು wcr.indianrailways.gov.in. ವೆಬ್ ಸೈಟ್ ಗೆ ಭೇಟಿ ನೀಡಬೇಕು.
 
                                 
			 
			
 
                                 
                                
















