ಬೆಂಗಳೂರು: ರೈಲ್ವೆ ಇಲಾಖೆಯ ವೆಸ್ಟರ್ನ್ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 14 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕೋಟಾದ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು (Western Railway Recruitment 2025) ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ವಿದ್ಯಾರ್ಹತೆ ಏನು ಎಂಬುದು ಸೇರಿ ನೇಮಕಾತಿಯ ಇಡೀ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ವೆಸ್ಟರ್ನ್ ರೈಲ್ವೆ
ಒಟ್ಟು ಹುದ್ದೆಗಳು: 14
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 24
ಉದ್ಯೋಗ ಸ್ಥಳ: ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್
ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕೋಟಾ ಲೆವೆಲ್ 2 ವಿಭಾಗದಲ್ಲಿ 2 ಹುದ್ದೆಗಳು ಖಾಲಿ ಇದ್ದರೆ, ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಲೆವೆಲ್ 1 ವಿಭಾಗದಲ್ಲಿ 12 ಹುದ್ದೆಗಳು ಖಾಲಿ ಇವೆ. ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಐಟಿಐ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. 18ರಿಂದ 33 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಎಸ್ಸಿ, ಎಸ್ಟಿ, ಮಾಜಿ ಸೈನಿಕರು, ವಿಶೇಷ ಚೇತನರು ಹಾಗೂ ಮಹಿಳೆಯರಿಗೆ 150 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ 500 ರೂಪಾಯಿ ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 63,200 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು rrc-wr.com ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.



















