ಮೈಸೂರು : ವಿದ್ಯಾರ್ಥಿಗೆ ಥಳಿಸಿದ ಆರೋಪದಡಿ ಜಿಲ್ಲೆಯ ಸೆಂಟ್ ಫಿಲೋಮಿನಾ ಶಾಲೆಯ ಶಿಕ್ಷಕ ಸುರೇಶ್ ವಿರುದ್ಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಲೆಯ 16 ವರ್ಷದ ವಿದ್ಯಾರ್ಥಿ ರೆಹಾನ್ ಷರೀಫ್ ಹಲ್ಲೆಗೊಳಗಾದ ವಿದ್ಯಾರ್ಥಿಯಾಗಿದ್ದು, ಶಿಕ್ಷಕ ಮುಷ್ಟಿಯಿಂದ ಕಣ್ಣಿಗೆ ಗುದ್ದಿದ ಪರಿಣಾಮ ಕಣ್ಣಿನ ಭಾಗದಲ್ಲಿ ರಕ್ತ ಹೆಪ್ಪುಗಟ್ಟಿದೆ.
ಹಲ್ಲೆಯಿಂದ ಗಾಯಗೊಂಡಿರುವ ರೆಹಾನ್ ಷರೀಫ್ ಸದ್ಯ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ ಟಿಸಿ ನೀಡಿ ಶಾಲೆಯಿಂದ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ವಿದ್ಯಾರ್ಥಿಯ ತಂದೆ ವಾಸಿಮ್ ಷರೀಫ್ ಪೊಲೀಸರಿಗೆ ದೂರು ನೀಡಿದ್ದಾರೆ.
ಶಿಕ್ಷಕ ಸುರೇಶ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಾಸಿಮ್ ಷರೀಫ್ ನೀಡಿದ ದೂರಿನ ಆಧಾರದ ಮೇಲೆ ಲಷ್ಕರ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

















