ಕಿಚ್ಚ ಸುದೀಪ್ (Kichcha Sudeep) ಅಭಿನಯದ ‘ಮ್ಯಾಕ್ಸ್’ (Max Film) ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ನೋಡಿ ಅಭಿಮಾನಿಗಳು ಖುಷಿ ಪಡುತ್ತಿದ್ದಾರೆ.
ಬಹು ಭಾಷೆಗಳಲ್ಲಿ ಟೀಸರ್ ರಿಲೀಸ್ ಆಗಿ ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿದೆ. ಹೀಗಾಗಿ ಈಗ ಅಭಿಮಾನಿಗಳು ಹಾಗೂ ಸಿನಿ ರಸಿಕರು ಚಿತ್ರದ ಕುರಿತು ಚರ್ಚೆ ಮಾಡುತ್ತಿದ್ದಾರೆ.
ಮ್ಯಾಕ್ಸ್ ಚಿತ್ರ ಪ್ಯಾನ್ ಇಂಡಿಯಾ ಚಿತ್ರವಾಗಿದೆ. ಇದೊಂದು ಮಾಸ್ ಚಿತ್ರ. ಟೀಸರ್ ನಲ್ಲಿರುವ ಡೈಲಾಗ್ ತುಣುಕುಗಳು ಈಗಾಗಲೇ ಭರ್ಜರಿ ಸದ್ದು ಮಾಡಿ, ಸಿನಿ ಪ್ರೇಕ್ಷಕರು ಚಿತ್ರದ ಬರುವಿಕೆಯನ್ನು ಎದುರು ನೋಡುವಂತಾಗಿದೆ. ಬಾ ಬಾ ಬ್ಲಾಕ್ ಶಿಪ್ ಹ್ಯಾವ್ ಯೂ ಎನಿ ಕ್ಲೂ ಎಂದು ಖಡಕ್ ಡೈಲಾಗ್ ಹೇಳುವ ಮೂಲಕ ಸುದೀಪ್ ಎಂಟ್ರಿ ಭರ್ಜರಿಯಾಗಿದ್ದು, ಅಭಿಮಾನಿಗಳು ಟೀಸರ್ ನೋಡುವಾಗಲೇ ಸಿಳ್ಳೆ ಹಾಕುವಂತಿದೆ.

ಮಾಸ್- ಗಾಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುದೀಪ್ ರನ್ನು ಅಭಿಮಾನಿಗಳು ಇಷ್ಟ ಪಡುತ್ತಿದ್ದಾರೆ. ಟೀಸರ್ ನಲ್ಲಿನ ಆ್ಯಕ್ಷನ್ ದೃಶ್ಯಗಳು ಮೈ ಜುಂ ಎನ್ನಿಸುವಂತಿದ್ದು ಮಾಸ್ ಅಭಿಮಾನಿಗಳ ಕಣ್ಮನ ಸೆಳೆದಿದೆ. ಸದ್ಯ ಚಿತ್ರದ ಟೀಸರ್ ಮಿಲಿಯನ್ ಗಟ್ಟಲೇ ವಿವ್ಸ್ ಪಡೆದು ಮುನ್ನುಗ್ಗುತ್ತಿದೆ. ಕಿಚ್ಚನ ಅವತಾರಕ್ಕೆ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ‘ಮ್ಯಾಕ್ಸ್’ ಚಿತ್ರದಲ್ಲಿ ಕಿಚ್ಚ ಸುದೀಪ್, ವರಲಕ್ಷ್ಮಿ ಶರತ್ ಕುಮಾರ್ (Varalaxmi Sarathkumar), ಸಂಯುಕ್ತ ಹೊರನಾಡು (Samyukta Hornad), ಪ್ರಮೋದ್ ಶೆಟ್ಟಿ ಸೇರಿದಂತೆ ಹಲವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಮತ್ತು ಸುದೀಪ್ ಅವರ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಿದೆ.