ಪಾರು, ವಧು ಹಾಗೂ ಮ್ಯಾಕ್ಸ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಟ ಶ್ರೀಧರ್ ಆರೋಗ್ಯ ತುಂಬಾ ಹದಗೆಟ್ಟಿದ್ದು, ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ.
ಶ್ರೀಧರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿ ಚಿಕಿತ್ಸೆಗೆ ಪ್ರತಿ ದಿನ 10 ರಿಂದ 15 ಸಾವಿರ ರೂ. ಖರ್ಚಾಗುತ್ತಿದೆ. ಇಲ್ಲಿಯವರೆಗೂ ತಮ್ಮ ಬಳಿ ಇದ್ದ ಹಣವನ್ನೆಲ್ಲಾ ಚಿಕಿತ್ಸೆಗಾಗಿ ಶ್ರೀಧರ್ ಮತ್ತು ತಾಯಿ ನೀಡಿದ್ದಾರೆ. ಇದೀಗ ಹೆಚ್ಚಿನ ಚಿಕಿತ್ಸೆಯ ಸಹಾಯಕ್ಕಾಗಿ ನಟ ಶ್ರೀಧರ್ ಅಂಗಲಾಚುತ್ತಿದ್ದು, ಇವರ ಜೊತೆ ನಟಿಸಿದ ಸಹನಟಿ ವೀಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ.