ನಟ ಅಲ್ಲು ಅರ್ಜುನ್ ಒಂದು ರಾತ್ರಿ ಜೈಲಿನಲ್ಲಿ ಕಳೆದು ಹೊರ ಬಂದಿದ್ದಾರೆ. ಈ ವೇಳೆ ಅವರು ಅಭಿಮಾನಿಗಳನ್ನು ಉದ್ಧೇಶಿಸಿ ಮಾತನಾಡಿದ್ದಾರೆ.
ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಎ11 ಆರೋಪಿ ಆಗಿರುವ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದರು. ಹೈಕೋರ್ಟ್ ನಲ್ಲಿ ಮಧ್ಯಂತರ ಜಾಮೀನು ಸಿಗುತ್ತಿದ್ದಂತೆ ಇಂದು ಬಿಡುಗಡೆಯಾಗಿರುವ ಅವರು, ಕಾನೂನಿಗೆ ತಲೆ ಬಾಗುವುದಾಗಿ ಹೇಳಿದ್ದಾರೆ. ಅಲ್ಲದೇ, ಅಭಿಮಾನಿಗಳಿಗೆ ಧನ್ಯವಾದ. ನಾನು ಆರಾಮಗಿದ್ದೇನೆ. ಯಾರೂ ಚಿಂತಿಸುವುದು ಬೇಡ. ನಾನು ತನಿಖೆಗೆ ಸಹಕರಿಸುತ್ತೇನೆ ಎಂದಿದ್ದಾರೆ.
ಅಲ್ಲದೇ, ಸಾವನ್ನಪ್ಪಿರುವ ಮಹಿಳೆಯ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ‘ನಾನು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಸಿನಿಮಾ ನೋಡಲು ಹೋದಾಗ ಈ ಘಟನೆ ನಡೆಯಿತು. ಅದು ಅಚಾನಕ್ಕಾಗಿ ಆಗಿದ್ದು. ಅದೊಂದು ಅಪಘಾತ’ ಎಂದು ಹೇಳಿದ್ದಾರೆ.
ಅವರ ಕುಟುಂಬಕ್ಕೆ ನಾನು ಕ್ಷಮೆ ಕೇಳುತ್ತೇನೆ. ಅದು ನನ್ನ ವೈಯಕ್ತಿಕ ನಿಯಂತ್ರಣದಲ್ಲಿ ಇರಲಿಲ್ಲ. ನಾನು ಕಳೆದ 20 ವರ್ಷಗಳಿಂದ ಅಲ್ಲಿಗೆ ಸಿನಿಮಾ ನೋಡಲು ಹೋಗುತ್ತಿದ್ದೇನೆ. 30ಕ್ಕೂ ಹೆಚ್ಚು ಬಾರಿ ಆ ಥಿಯೇಟರ್ಗೆ ಭೇಟಿ ಕೊಟ್ಟಿದ್ದೇನೆ. ಯಾವಾಗಲೂ ಈ ರೀತಿ ಆಗಿರಲಿಲ್ಲ. ಸಾವಿನ ನಷ್ಟ ತುಂಬಲು ಸಾಧ್ಯವಿಲ್ಲ. ಆದರೆ, ನನ್ನ ಕೈಲಾದ ಸಹಾಯ ಮಾಡುತ್ತೇನೆ ಎಂದು ಹೇಳಇದ್ದಾರೆ.