ನವದೆಹಲಿ: ದೇಶದ ಜಿಡಿಪಿ ಕುಸಿತ ಕಂಡಿದ್ದು, ನಿರೀಕ್ಷೆಗಿಂತ ಬಹಳ ಕಡಿಮೆಯಾಗಿದೆ. ಈ ವಿಷಯದ ಕುರಿತು ಲೋಕಸಭೆಯಲ್ಲಿ ಮಾತನಾಡಿದರು.
ಜುಲೈ ನಿಂದ ಸೆಪ್ಟೆಂಬರ್ ವರೆಗಿನ ಕ್ವಾರ್ಟರ್ನಲ್ಲಿ ಜಿಡಿಪಿ ಶೇ. 5.4ರಷ್ಟು ಬೆಳೆದಿದೆ. ಇದು ನಿರೀಕ್ಷೆಗಿಂತ ಬಹಳ ಕಡಿಮೆ ಇದೆ. ಲೋಕಸಭೆಯಲ್ಲಿ ನಡೆದ ಚರ್ಚೆಯ ವೇಳೆ ಪ್ರತಿಕ್ರಿಯಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎರಡನೇ ಕ್ವಾರ್ಟರ್ ನ ಜಿಡಿಪಿ ಬೆಳವಣಿಗೆ ಕುಂಠಿತಗೊಂಡಿರುವುದು ತಾತ್ಕಾಲಿಕ ಹಿನ್ನಡೆ ಮಾತ್ರ. ಮುಂಬರುವ ತ್ರೈಮಾಸಿಕ ಅವಧಿಗಳಲ್ಲಿ ಆರ್ಥಿಕತೆ ಉತ್ತಮ ರೀತಿಯಲ್ಲಿ ಬೆಳೆಯಲಿದೆ ಎಂದಿದ್ದಾರೆ.
ಬೆಳವಣಿಗೆಯಲ್ಲಿ ಸ್ಥಿರತೆ ಇದೆ. ಕಳೆದ ಮೂರು ವರ್ಷದಲ್ಲಿ ಜಿಡಿಪಿ ದರ ಸರಾಸರಿಯಾಗಿ ಶೇ. 8.3ರಷ್ಟಿದೆ. ವಿಶ್ವದ ಪ್ರಮುಖ ಆರ್ಥಿಕತೆಗಳ ಪೈಕಿ ಭಾರತವೇ ಅತಿವೇಗ ಹೊಂದಿದೆ ಎಂದಿದ್ದಾರೆ.
ಭಾರತದ ಆರ್ಥಿಕತೆ ಮೊದಲ ಕ್ವಾರ್ಟರ್ನಲ್ಲಿ (2024ರ ಏಪ್ರಿಲ್ನಿಂದ ಜೂನ್) ಶೇ. 6.7ರಷ್ಟು ಹೆಚ್ಚಿತ್ತು. ಎರಡನೇ ಕ್ವಾರ್ಟರ್ ಆದ ಜುಲೈನಿಂದ ಸೆಪ್ಟೆಂಬರ್ ಅವಧಿಯಲ್ಲಿ ಶೇ. 5.4ರಷ್ಟು ಮಾತ್ರವೇ ಹೆಚ್ಚಾಗಿದೆ. ಹಣದುಬ್ಬರದ ಬಗ್ಗೆ ಮಾತನಾಡಿದ ನಿರ್ಮಲಾ ಸೀತಾರಾಮನ್, ಯುಪಿಎ ಅವಧಿಗಿಂತ ಎನ್ಡಿಎ ಆಡಳಿತದ ಅವಧಿಯಲ್ಲಿ ಬೆಲೆ ಏರಿಕೆಯು ಹೆಚ್ಚು ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.