ಬೆಂಗಳೂರು: ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿರುವ ಆರ್ ಸಿಬಿ ವಿಕ್ಟರಿ ಪರೇಡ್ ಗೆ ಮುಂದಾಗಿತ್ತು. ಆದರೆ, ಈಗ ಗೃಹ ಇಲಾಖೆ ಅದಕ್ಕೆ ಅವಕಾಶ ನೀಡುತ್ತಿಲ್ಲ. ತೆರೆದ ಬಸ್‌ನಲ್ಲಿ ಆರ್‌ಸಿಬಿ ವಿಜಯೋತ್ಸವ ಇಲ್ಲ. ಆರ್‌ಸಿಬಿ ಆಟಗಾರರು ಬಸ್ಸಿನಲ್ಲಿ ಬಂದು ಬಸ್ಸಿನಲ್ಲಿ ಹೋಗುತ್ತಾರೆ ಎಂದು ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ಇಂದು ಗ್ರ‍್ಯಾಂಡ್ ಸ್ಟೆಪ್ ಬಳಿ ಸಿದ್ಧತೆ ವೀಕ್ಷಣೆ ಮಾಡಿದ ನಂತರ ಮಾತನಾಡಿದ ಅವರು, ಗೃಹ ಇಲಾಖೆ ಒಪ್ಪದ ಕಾರಣ ಪರೇಡ್‌ಗೆ ಒಪ್ಪಿಗೆ ನೀಡಿಲ್ಲ. ವಿಧಾನಸೌಧ ಹಾಗೂ ಹೈಕೋರ್ಟ್ ಭದ್ರತೆ ದೃಷ್ಟಿಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ವಿಕ್ಟರಿ ಪರೇಡ್‌ಗೆ ಲಕ್ಷಾಂತರ ಜನರು ಸೇರುವುದರಿಂದ ನಿರ್ವಹಣೆ ಕಷ್ಟ. ನಗರದ ಹೃದಯ ಭಾಗದಲ್ಲಿ ಟ್ರಾಫಿಕ್ ಸಮಸ್ಯೆ ಆಗಲಿದೆ. ವಿಧಾನಸೌಧ, ಹೈಕೋರ್ಟ್ ಸೇರಿದಂತೆ ಪ್ರಮುಖ ಸರ್ಕಾರಿ ಕಟ್ಟಡಗಳಿವೆ. ಹೀಗಾಗಿ ಸೂಕ್ತ ಭದ್ರತೆ ಒದಗಿಸುವುದ ಕಷ್ಟ ಎಂದಿದ್ದಾರೆ.