ಬಳ್ಳಾರಿ: ಯತ್ನಾಳ್ ಉಚ್ಛಾಟನೆ ರಾಷ್ಟ್ರೀಯ ನಾಯಕರ ನಿರ್ಧಾರ ಎಂದು ಜಿಲ್ಲೆಯಲ್ಲಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರೂ ಪಕ್ಷದ ನಿರ್ಧಾರದಂತೆ ನಡೆದುಕೊಳ್ಳಬೇಕು. ಯತ್ನಾಳ್ ನಮ್ಮ ಹಿರಿಯರು. ಆತ್ಮೀಯರು. ಅವರೊಂದಿಗೆ ನಾನು ಮಾತನಾಡಿದ್ದೇನೆ. ಪಕ್ಷದಲ್ಲಾದ ಬೆಳವಣಿಗೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ವಿವರಿಸುತ್ತಾರೆ. ಪಕ್ಷದಲ್ಲಿನ ಎಲ್ಲ ಸಮಸ್ಯೆಗಳಿಗೂ ಪರಿಹಾರವಿದೆ ಎಂದು ಹೇಳಿದ್ದಾರೆ.
ಪಕ್ಷದಲ್ಲಿ ಹಿಂದೂತ್ವದ ಬಗ್ಗೆ ಮಾತನಾಡುವವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ಮಾತನಾಡಿದ ಅವರು, ಪಕ್ಷದಲ್ಲಿ ಹಿಂದುತ್ವದ ಬಗ್ಗೆ ಮಾತನಾಡುವ ನಾಯಕರಿಗೆ ಯಾವುದೇ ಆತಂಕವಿಲ್ಲ. ಯಾವುದೇ ರೀತಿ ಟಾರ್ಗೆಗ್ ಮಾಡಿಲ್ಲ. ಪಕ್ಷದಲ್ಲಿನ ಎಲ್ಲ ಸಮಸ್ಯೆಗಳು ಶೀಘ್ರದಲ್ಲೇ ಬಗೆ ಹರಿಯುತ್ತವೆ ಎಂದಿದ್ದಾರೆ.
ಕುಮಾರ್ ಬಂಗಾರಪ್ಪ ಮನೆಯಲ್ಲಿ ಯತ್ನಾಳ ಬಣದ ಮೀಟಿಂಗ್ ವಿಚಾರವಾಗಿ ಮಾತನಾಡಿದ ಅವರು, ಇದೆಲ್ಲವನ್ನು ಪಕ್ಷದ ವರಿಷ್ಠರು ಗಮನಿಸುತ್ತಿದ್ದಾರೆ. ಎಲ್ಲದಕ್ಕೂ ರಾಜ್ಯಾಧ್ಯಕ್ಷರು ಶೀಘ್ರದಲ್ಲಿ ಉತ್ತರ ನೀಡುತ್ತಾರೆ. ರಾಷ್ಟ್ರೀಯ ಅಧ್ಯಕ್ಷರು ಏಪ್ರಿಲ್ ತಿಂಗಳಲ್ಲಿ ಎಲ್ಲದಕ್ಕೂ ಉತ್ತರ ನೀಡುತ್ತಾರೆ ಎಂದಿದ್ದಾರೆ.