ಚೆನ್ನೈ: 30 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಉಗ್ರನನ್ನು ಕೊನೆಗೂ ಅರೆಸ್ಟ್ ಮಾಡಲಾಗಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟಗಳ (Bengaluru Blast) ಪ್ರಮುಖ ಸೂತ್ರಧಾರಿಯನ್ನು ತಮಿಳುನಾಡು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿನ (Tamil Nadu) ನಾಗೂರು ನಿವಾಸಿ ಅಬೂಬಕರ್ ಸಿದ್ದಿಕ್ (60) ಬಂಧಿತ ಉಗ್ರ ಎನ್ನಲಾಗಿದೆ.
1995ರಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ತಮಿಳುನಾಡು ಪೊಲೀಸರು ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಆತನೊಂದಿಗೆ ಇದ್ದ ಮೊಹಮ್ಮದ್ ಅಲಿಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಈತ 1999ರಿಂದ ತಲೆ ಮರೆಸಿಕೊಂಡಿದ್ದ.
2013ರ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿ ಸ್ಫೋಟ, 2011ರಲ್ಲಿ ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ ನೇತೃತ್ವದ ರಥಯಾತ್ರೆಯ ಮೇಲೆ ಮಧುರೈಯಲ್ಲಿ ನಡೆದ ಪೈಪ್ ಬಾಂಬ್ ದಾಳಿ, 1991ರ ಚೆನ್ನೈ ಹಿಂದೂ ಮುನ್ನಣಿ ಕಾರ್ಯಾಲಯದ ಮೇಲೆ ನಡೆದ ದಾಳಿಯಲ್ಲಿ ಈತ ಆರೋಪಿಯಾಗಿದ್ದ. ನಾಗೂರಿನಲ್ಲಿ ಪಾರ್ಸೆಲ್ ಬಾಂಬ್ ಸ್ಫೋಟ, 1997ರಲ್ಲಿ ಚೆನ್ನೈ, ತಿರುಚಿರಾಪಳ್ಳಿ, ಕೊಯಮತ್ತೂರು ಸೇರಿ 7 ಪ್ರದೇಶಗಳಲ್ಲಿ ಸ್ಫೋಟ, ಚೆನ್ನೈ ಎಗ್ಮೋರ್ ಪೊಲೀಸ್ ಕಮೀಷನರ್ ಕಚೇರಿ ಸ್ಫೋಟ ಸೇರಿಂದಂತೆ ಹಲವು ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದ.