ಕೊಪ್ಪಳ: ಸಿಎಂ ಸಿದ್ದರಾಮಯ್ಯ ಶಾಸಕ ಮುನಿರತ್ನ ಪ್ರಕರಣದ ಕುರಿತು ಮಾತನಾಡಿದ್ದು, ದ್ವೇಷ ರಾಜಕಾರಣ ನಾನು ಮಾಡುವುದಿಲ್ಲ. ಬಿಜೆಪಿ ಮಾಡುತ್ತದೆ ಎಂದು ಗುಡುಗಿದ್ದಾರೆ.
ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲು ಬಂದಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಅವರು, ಶಾಸಕ ಮುನಿರತ್ನ ಸಾಕಷ್ಟು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿಯೇ ಎಫ್ ಐಆರ್ ದಾಖಲಾಗಿದೆ. ಅಲ್ಲದೇ, ತನಿಖೆಗೆ ಎಸ್ ಐಟಿ ರಚನೆ ಮಾಡಲಾಗಿದೆ. ನಾವೇನು ಮುನಿರತ್ನಗೆ ಕಾನೂನು ಉಲ್ಲಂಘಿಸುವಂತೆ ಹೇಳಿಲ್ಲ ಎಂದು ಹೇಳಿದ್ದಾರೆ.
ತುಂಗಭದ್ರಾ ಡ್ಯಾಂ ಗೇಟ್ ಮುರಿದಾಗ ಜಲಾಶಯ ರಿಪೇರಿಯಾಗಿ ಮತ್ತೆ ಡ್ಯಾಂ ತುಂಬುತ್ತಿದೆ. ಮಳೆಯ ಕೃಪೆಯಿಂದ ಮತ್ತೆ ಜಲಾಶಯ ತುಂಬಿದೆ. ಮುಂಗಾರಿನ ಬೆಳೆಗೆ ನೀರು ದೊರೆಯುತ್ತದೆ. ಹೀಗಾಗಿ ಈ ಜಲಾನಯ ಪ್ರದೇಶದ ರೈತರಿಗೆ ಹಿಂಗಾರು ಬೆಳೆಗೂ ನೀರು ಲಭಿಸಲಿದೆ ಎಂದು ಭರವಸೆ ನೀಡಿದರು.
ಗೇಟ್ ಮುರಿದಾಗ ರೈತರಲ್ಲಿ ಆತಂಕ ಮನೆ ಮಾಡಿತ್ತು. ಡ್ಯಾಂ ನಿಂದ 30 ಟಿಎಂಸಿಗೂ ಹೆಚ್ಚಿನ ನೀರು ಹರಿದು ಹೋಗಿತ್ತು. ಇದು ರೈತರಲ್ಲಿ ಆತಂಕ ಮೂಡಿಸಿತ್ತು. ಮತ್ತೆ ಮಳೆ ಬಂದು ತುಂಗಭದ್ರೆ ತುಂಬಿದ್ದರಿಂದ ರೈತರಲ್ಲಿ ಸಂತಸ ಮನೆ ಮಾಡಿದೆ. ಹಿಂಗಾರಿಗೂ ರೈತರಿಗೆ ನೀರು ಒದಗಿಸಲಾಗುವುದು ಎಂದು ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿನ ರಸ್ತೆಗಳು ಬಿಜೆಪಿ ಹಾಗೂ ಸಮ್ಮಿಶ್ರ ಸರ್ಕಾರ ಇದ್ದಾಗ ನಿರ್ಮಾಣವಾಗಿವೆ. ಈಗ ಮಳೆಯಾಗಿ ಅವು ದುರಸ್ತಿಗೊಂಡಿವೆ. ಅವುಗಳನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.