ಬೆಂಗಳೂರು ಗ್ರಾಮಾಂತರ: ಸಿಎಂ ಸಿದ್ದರಾಮಯ್ಯ ಜಾತಿಗಣತಿ ವರದಿ ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬೆಳಗಾವಿ ಹಾಗೂ ಮಂಗಳೂರಿಗೆ ಹೋಗಿದ್ದ ಸಂದರ್ಭದಲ್ಲಿ ಸಿಎಂ ವರದಿ ಬಗ್ಗೆ ಹೇಳಿದ್ದಾರೆ. ನಾನು ವರದಿ ನೋಡಿಲ್ಲ. ವರದಿ ಬಗ್ಗೆ ಇನ್ನೂ ಕ್ಯಾಬಿನೆಟ್ ನಲ್ಲಿ ಚರ್ಚೆಯಾಗಬೇಕು. ನಾವು ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ. ಕೆಲವರು ರಾಜಕಾರಣದ ಸ್ಟೇಟ್ ಮೆಂಟ್ ರೀತಿ ಮಾತನಾಡುತ್ತಾರೆ ಎಂದು ಹೇಳಿದ್ದಾರೆ. ಸತ್ಯಾಂಶಗಳನ್ನು ತಿಳಿದುಕೊಂಡು ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸವನ್ನು ನಾವು ಮಾಡುತ್ತೇವೆ.


















