ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಪಕ್ಷ 6 ವರ್ಷಗಳ ಕಾಲ ಉಚ್ಛಾಟಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಹಲವು ನಾಯಕರು ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸುತ್ತಿದ್ದಾರೆ. ಮಾಜಿ ಸಚಿವ ಹಾಗೂ ಯತ್ನಾಳ್ ಕಡು ರಾಜಕೀಯ ವೈರಿ ಅಪ್ಪು ಪಟ್ಟಣಶೆಟ್ಟಿ ಕೂಡ ಈ ಕುರಿತು ಮಾತನಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಉಚ್ಛಾಟನೆ ಮಾಡಿರುವುದು ಖುಷಿ ತಂದಿದೆ. ಈ ನಿರ್ಧಾರವನ್ನು ಬಹಳ ದಿನಗಳ ಹಿಂದೆಯೇ ತೆಗೆದುಕೊಳ್ಳಬೇಕಿತ್ತು. ಯತ್ನಾಳ್ ಮೂರನೇ ಸಲ ಪಕ್ಷದಿಂದ ಉಚ್ಚಾಟನೆ ಆಗಿದ್ದಾರೆ. ಮುಂದೆ ಅವರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ವಾಪಸ್ ಕರೆಯಬಾರದು. ರಾಜಕೀಯವಾಗಿ ಯತ್ನಾಳ್ ಏನು ಅಲ್ಲ. ಅವರಿಂದ ಪಕ್ಷಕ್ಕೆ ಯಾವುದೇ ಲಾಭವಿಲ್ಲ. ತಡವಾದರೂ ಉತ್ತಮ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ.