ನವದೆಹಲಿ: ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಜೋರಾಗಿದ್ದು, ಬಿ.ವೈ. ವಿಜಯೇಂದ್ರ(B.Y. Vijayendra) ಹಾಗೂ ರೆಬೆಲ್ಸ್ ತಂಡದ ಮಧ್ಯೆ ದೊಡ್ಡ ವಿವಾದವೇ ಸೃಷ್ಟಿಯಾಗಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರೆಬೆಲ್ಸ್ ತಂಡವೊಂದು ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದೆ. ಈ ಮಧ್ಯೆ ನಾಯಕರನ್ನು ಭೇಟಿ ಮಾಡುವ ಕಾರ್ಯ ನಡೆಯುತ್ತಿದೆ.
ಈ ವೇಳೆ ಮಾತನಾಡಿರುವ ಶಾಸಕ ರಮೇಶ ಜಾರಕಿಹೊಳಿ,(Ramesh Jarakiholi) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನು(j.p.nadda) ಸೋಮವಾರ ರಾತ್ರಿಯೇ ಭೇಟಿ ಮಾಡಿದ್ದೇವೆ. ನಾಯಕರು ನಮಗೆ ಶಹಭಾಸ್ ಗಿರಿ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ಆದರೆ, ನಾವು ಅಧ್ಯಕ್ಷರ ರೀತಿಯಲ್ಲಿ ಹತಾಶೆ ಭಾವನೆಯಲ್ಲಿ ಮಾತನಾಡುವುದಿಲ್ಲ. ಎಲ್ಲ ವಿಚಾರಗಳನ್ನು ಹೈಕಮಾಂಡ್ ಬಳಿ ಹೇಳಿ ಅವರಿಗೆ ಮನವರಿಕೆ ಮಾಡಿ ಕೊಟ್ಟಿದ್ದೇವೆ. ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ತಲೆಬಾಗುತ್ತೇವೆ ಎಂದು ಹೇಳಿದ್ದಾರೆ.
ಅಂತಿಮ ಹಂತದ ಚರ್ಚೆಯ ನಂತರ ನಾವು ಏನೂ ಮಾತನಾಡುವುದಿಲ್ಲ. ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದನ್ನು ತಲೆಬಾಗಿ ಸ್ವೀಕಾರ ಮಾಡುತ್ತೇವೆ ಎಂದು ಹೇಳಿದ್ದಾರೆ.