ಹಾಸನ: ಜಿಲ್ಲೆಯಲ್ಲಿ ಹೃದಯಾಘಾತದಿಂದ (Heart attack) ಸರಣಿ ಸಾವು ಸಂಭವಿಸುತ್ತಿದ್ದು, ಆತಂಕ ಎದುರಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ನಾಲ್ವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಸಂಪತ್‌ಕುಮಾರ್ (53), ಸಿ.ಬಿ ವಿರೂಪಾಕ್ಷ (70), ಸಂತೋಷ್ (41), ದೇವಮ್ಮ (72) ಸಾವನ್ನಪ್ಪಿರುವ ದುರ್ದೈವಿಗಳು. ಹಾಸನ ನಗರದ (Hassan City) ಕರಿಗೌಡ ಕಾಲೋನಿ ನಿವಾಸಿ ಸಂಪತ್‌ಕುಮಾರ್‌ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಹಿಮ್ಸ್ ಆಸ್ಪತ್ರೆಗೆ (HIMS Hospital) ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ (Teratment) ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಸಕಲೇಶಪುರ ತಾಲ್ಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದ ಸಿ.ಬಿ. ವಿರೂಪಾಕ್ಷ ಅವರಿಗೆ ರಾತ್ರಿ 11:30ರ ವೇಳೆಗೆ ಎದೆನೋವು ಕಾಣಿಸಿಕೊಂಡಿತ್ತು. ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಗ್ರಾಪಂ ಸದಸ್ಯ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಆಲೂರು ತಾಲ್ಲೂಕಿನ, ಕಲ್ಲಾರೆ ಗ್ರಾಮದಲ್ಲಿ ನಡೆದಿದೆ. ಸಂತೋಷ್ (41) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಾತ್ರಿ ಮಲಗಿದ್ದಲ್ಲಿಯೇ ಹೃದಯಾಘಾತವಾಗಿದೆ. ಕೂಡಲೇ ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲಿ ಹೃದಯಾಘಾತದಿಂದ ಸಂತೋಷ್ ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸಂತೋಷ್ ಕಾರಗೋಡು ಗ್ರಾಪಂ ಸದಸ್ಯರಾಗಿದ್ದರು ಎನ್ನಲಾಗಿದೆ.
ಸಕೇಶಪುರದ ಅರೆಕೆರೆ ಗ್ರಾಮದಲ್ಲಿ ನಡೆದಿದೆ. ದೇವಮ್ಮ (72) ಹೃದಯಾಘಾತಕ್ಕೆ ಬಲಿಯಾದ ವೃದ್ದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.