ಬೆಂಗಳೂರು: ‘ಬಾಸ್’ ಚಲನಚಿತ್ರಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್ನಲ್ಲಿ ನಡೆದಿದೆ.
ವಿಚಾರಣೆ ವೇಳೆ ಅರ್ಜಿದಾರರಾದ ದರ್ಶನ್ ಹಾಗೂ ವಿಜಯಲಕ್ಷ್ಮೀ ದರ್ಶನ್ ಪರ ವಕೀಲರು, ‘ಬಾಸ್’ ಚಲನಚಿತ್ರವನ್ನು ಬಿಡುಗಡೆ ಮಾಡುವ ಸಿದ್ಧತೆಗಳು ನಡೆಯುತ್ತಿವೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಪ್ರಕರಣದ ಅಂತಿಮ ನಿರ್ಣಯವಾಗುವವರೆಗೆ ಚಿತ್ರವನ್ನು ಬಿಡುಗಡೆ ಮಾಡದಂತೆ ಮಧ್ಯಂತರ ನಿರ್ದೇಶನ ನೀಡುವಂತೆ ಮನವಿ ಮಾಡಿದರು.

ಮನವಿಯನ್ನು ಪರಿಗಣಿಸಿದ ನ್ಯಾಯಾಲಯವು, ಪ್ರತಿವಾದಿಗಳಾದ ಸಿರಿ ಪ್ರೊಡಕ್ಷನ್ಸ್ ಹಾಗೂ ಚಿತ್ರದ ನಿರ್ದೇಶಕರಾದ ಲವಾವಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ಎರಡು ದಿನಗಳ ಕಾಲ ‘ಬಾಸ್’ ಚಲನಚಿತ್ರವನ್ನು ಬಿಡುಗಡೆ ಮಾಡದಂತೆ ತಾತ್ಕಾಲಿಕ ಮೌಖಿಕ ನಿರ್ದೇಶನ ನೀಡಿದೆ.
ನ್ಯಾಯಾಲಯವು ಈ ಪ್ರಕರಣವನ್ನು 25-06-2026ರಂದು ಮುಂದಿನ ವಿಚಾರಣೆಗೆ ನಿಗದಿಪಡಿಸಿದ್ದು, ಆ ದಿನಗಳಲ್ಲಿ ಉಭಯ ಪಕ್ಷಗಳ ವಾದಗಳನ್ನು ಆಲಿಸಿ ಮುಂದಿನ ಆದೇಶವನ್ನ ಪ್ರಕಟಿಸುವ ಸಾಧ್ಯತೆಯಿದೆ. ಹೀಗಾಗಿ, ಹೈಕೋರ್ಟ್ನ ಮುಂದಿನ ಆದೇಶದವರೆಗೆ ‘ಬಾಸ್’ ಚಲನಚಿತ್ರದ ಬಿಡುಗಡೆಗೆ ತಾತ್ಕಾಲಿಕ ತಡೆ ಮುಂದುವರಿಯಲಿದೆ.



















