ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಶುರುವಾಗಿದ್ದು, ಏರಿಕೆಯತ್ತ ಕೊವಿಡ್-19 ಮುಖ ಮಾಡಿದೆ.
ಭಾನುವಾರ ರಾಜ್ಯದಲ್ಲಿ ಒಟ್ಟು 47 ಆ್ಯಕ್ಟೀವ್ ಕೇಸ್ ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 9 ಜನರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ 47 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ 46 ಜನರು ಹೋಮ್ ಐಸೋಲೇಷನ್ ನಲ್ಲಿದ್ದಾರೆ. ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಶೇ. 8.65ರಷ್ಟು ಪಾಸಿಟಿವ್ ಕೇಸ್ ದಾಖಲಾಗಿವೆ.