ಬೆಂಗಳೂರು: ರಾಜ್ಯದಲ್ಲಿ ಎಸ್‌ಸಿಪಿ ಹಾಗೂ ಟಿಎಸ್‌ಪಿ ಅನುದಾನವನ್ನು ಸರ್ಕಾರ ಬೇರೆಡೆಗೆ ವರ್ಗಾಯಿಸಿ, ಗ್ಯಾರೆಂಟಿಗಳಿಗೆ ಬಳಕೆ ಮಾಡಿದರೆ ಏನು ತಪ್ಪಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಸಿಪಿ ಹಾಗೂ ಟಿಎಸ್‌ಪಿ ಅನುದಾನವನ್ನು ಗ್ಯಾರೆಂಟಿಗಳಿಗೆ ಬಳಕೆ ಮಾಡಿಕೊಂಡರೆ ತಪ್ಪೇನಿದೆ? ಎಸ್‌ಸಿ ಹಾಗೂ ಎಸ್‌ಟಿ ಸಮುದಾಯಕ್ಕೂ ನಾವು ಗ್ಯಾರೆಂಟಿಗಳನ್ನು ನೀಡುತ್ತಿದ್ದೇವೆ. ಅದರಲ್ಲಿ ಈ ಹಣ ಬಳಕೆ ಆಗುತ್ತದೆ ಎಂದು, ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.