ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ 18 ಮಂದಿ ಬಿಜೆಪಿ ಶಾಸಕರ ಅಮಾನತು ಸರಿಯಾಗಿದೆ ಎಂದು ರಾಜ್ಯದ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಅವರಿಗೆ ಘನತೆ ಗೌರವವಿದೆ. ಆ ಸ್ಥಾನಕ್ಕೆ ಪ್ರತಿಯೊಬ್ಬರು ಬೆಲೆ ಹಾಗೂ ಗೌರವವನ್ನು ಕೊಡಲೇಬೇಕು. ಬಿಜೆಪಿ ಶಾಸಕರುಗಳು ಸದನದಲ್ಲಿ ನಡೆದುಕೊಂಡ ರೀತಿ ಸರಿಯಲ್ಲ. ಹೀಗಾಗಿ, ಸ್ಪೀಕರ್ ಆ ನಿಲುವು ತೆಗೆದುಕೊಂಡಿದ್ದಾರೆ. ಅದು ಸರಿಯಿದೆ ಎಂದಿದ್ದಾರೆ.