ಬೆಂಗಳೂರು: ಇಲ್ಲಿನ ಪಂಚಶೀಲನಗರ ಪಾಲಿಕೆಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಗಳು ನೀವು ಸಿಎಂ ಆಗಬೇಕು ಎಂದು ಹೇಳಿದರು. ಇದಕ್ಕೆ ಡಿಸಿಎಂ ಉತ್ತರ ನೀಡಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಯಾರು ಏನು ಬೇಕಾದರು ಆಗಬಹುದು. ನಮ್ಮ ತಂದೆ ರೈತರಾಗಿದ್ದರು. ನಿಮ್ಮ ವೃತ್ತಿ ಆಯ್ಕೆ ಮಾಡಿಕೊಳ್ಳಬೇಕಾದರೆ ಗುಣಮಟ್ಟದ ಶಿಕ್ಷಣ, ಆರ್ಥಿಕ ಸ್ಥಿತಿ ಹಾಗೂ ನಾಯಕತ್ವದ ಗುಣ ಮುಖ್ಯ ಎಂದಿದ್ದಾರೆ.
ವಿಧಾನಸೌಧನ ಸಮ್ಮೇಳನಾ ಸಭಾಂಗಣವು ದೇಶಕ್ಕೆ ಸಂವಿಧಾನ ತರುವಂತಹ ಜಾಗ, ಶಾಸಕಾಂಗ ಸಭೆ ನಡೆಸುವಂತಹ ಜಾಗ, ನೀವೇ ಇಲ್ಲಿ ಕೂತು, ಸಿಎಂ, ಡಿಸಿಎಂ, ಐಎಎಸ್ ಅಧಿಕಾರಿಗಳು ಆಗಬೇಕು’ ಎಂದು ಸಲಹೆ ನೀಡಿದರು. ಈ ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಕುರಿತು ಹಲವಾರು ಪ್ರಶ್ನೆಗಳನ್ನು ಕೇಳಿದರು. ಇದಕ್ಕೆ ಡಿಕೆಶಿ ಉತ್ತರಿಸಿದರು.