ಬೆಂಗಳೂರು: ಕಳೆದ ಕೆಲವು ದಿನಗಳಿಂದ ಗೃಹ ಲಕ್ಷ್ಮಿ ಹಣ ಬಿಡುಗಡೆಯಾಗುತ್ತಿಲ್ಲ ಎಂದು ಮಹಿಳೆಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ.
ಗೃಹ ಲಕ್ಷ್ಮೀ ಯೋಜನೆಯ 2 ಸಾವಿರ ರೂ. ಹಣವನ್ನು ಮನೆಯ ಯಜಮಾನಿ ಖಾತೆಗೆ ಹಾಕುವುದರಲ್ಲಿ ವಿಳಂಬವಾಗುತ್ತಿದೆ. ಹೀಗಾಗಿ ಒಂದು ತಿಂಗಳ ಹಣ ಖಾತೆಗೆ ಬಿದ್ದಿಲ್ಲ. ಹಲವೆಡೆ ನಮಗೆ ಹಣ ಬಂದಿಲ್ಲ ಎಂದು ಹೇಳಲಾಗುತ್ತಿದೆ. ಒಂದು ತಿಂಗಳು ಬಿಟ್ಟು ಇನ್ನೊಂದು ತಿಂಗಳು ಹಣ ಹಾಕಲಾಗುತ್ತದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ ಎಂದು ಹೇಳಿದ್ದಾರೆ.