ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ.
ಜಿಪಂ ಮಾಜಿ ಸದಸ್ಯೆ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ಈ ಪ್ರಕರಣದಲ್ಲಿ ಮಾಜಿ ಸಂಸದ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ಊರ್ಜಿತ ಅಲ್ಲ ಎಂದು ಕೋರ್ಟ್ ಅರ್ಜಿ ವಜಾ ಮಾಡಿ ಆದೇಶ ಹೊರಡಿಸಿದೆ.
ಜಿಪಂ ಮಾಜಿ ಸದಸ್ಯೆಗೆ ಬೆದರಿಕೆಯೊಡ್ಡಿ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದರು ಎಂಬುವುದು ತನಿಖೆಯಿಂದ ಸಾಬೀತಾಗಿದೆ ಎಂದು ಸಿಐಡಿ ವಾದಿಸಿತ್ತು. 40 ವರ್ಷದ ಸಂತ್ರಸ್ತೆ ಮೇಲೆ ಹಾಸನದ ಮಾಜಿ ಸಂಸದ ಅತ್ಯಾಚಾರ ಎಸಗಿದ್ದ ಆರೋಪದ ಬಗ್ಗೆ ಪ್ರತ್ಯೇಕ ಪ್ರಕರಣದ ತನಿಖೆ ನಡೆಸಿದ್ದ ಎಸ್ಐಟಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು.