ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ವಿಮಾನ ನಿಲ್ದಾಣ ರಚನೆಗೆ ಸಿದ್ಧತೆ ನಡೆದಿದೆ. ಈ ಮೂಲಕ ರಾಜ್ಯದ ವಿಮಾನ ನಿಲ್ದಾಣಗಳ ಸಂಖ್ಯೆ 9ಕ್ಕೆ ಏರಿಕೆಯಾಗಲಿದೆ.
2025 ರಲ್ಲಿ ಈ ವಿಮಾನ ನಿಲ್ದಾಣ ಆರಂಭವಾಗಲಿದೆ. ವಿಜಯಪುರದಲ್ಲಿ ವಿಮಾನ ನಿಲ್ದಾಣ ಆರಂಭವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್, ಈ ಹಿಂದೆ ನಿರ್ಮಾಣ ಹಂತದಲ್ಲಿರುವ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗಳು ಭರದಿಂದ ಸಾಗಿದ್ದು, 2025 ರಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದ್ದರು.
ಈಗಾಗಗಲೇ ಉತ್ತರ ಕರ್ನಾಟಕದಲ್ಲಿ ಬೆಳಗಾವಿ, ಹುಬ್ಬಳ್ಳಿ, ಬಳ್ಳಾರಿ ಜಿಂದಾಲ್, ಕಲಬುರಗಿ, ಬೀದರ್ ನಲ್ಲಿ ವಿಮಾನ ನಿಲ್ದಾಣಗಳಿವೆ. ವಿಜಯಪುರದಲ್ಲಿ ಕೂಡ ವಿಮಾನ ನಿಲ್ದಾಣ ಆರಂಭವಾದರೆ, ಉತ್ತರ ಕರ್ನಾಟಕದಲ್ಲಿನ ವಿಮಾನ ನಿಲ್ದಾಣಗಳ ಸಂಖ್ಯೆ 6ಕ್ಕೆ ಏರಿಕೆಯಾಗಲಿದೆ.
ವಿಜಯಪುರ ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಳಿಲ್ಲದೆ ಲಕ್ಷಾಂತರ ಜನ ದುಡಿಯಲು ನೆರೆಯ ಮಹಾರಾಷ್ಟ್ರ, ಗೋವಾ ರಾಜ್ಯಕ್ಕೆ ಗುಳೆ ಹೋಗುವುದು ತಪ್ಪಿಲ್ಲ. ಇಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿವೆ. ಅವುಗಳ ಅಭಿವೃದ್ಧಿಯಾಗಬೇಕಿದೆ. ಹೀಗಾಗಿ ಜನರು ಇವುಗಳ ಅಭಿವೃದ್ಧಿ ಮಾಡಿ, ದೊಡ್ಡ ದೊಡ್ಡ ಕೈಗಾರಿಕೆಗಳನ್ನು ಜಿಲ್ಲೆಗೆ ತಂದ ನಂತರ ವಿಮಾನ ನಿಲ್ದಾಣ ಆರಂಭಿಸಿ ಎಂದು ಮನವಿ ಮಾಡುತ್ತಿದ್ದಾರೆ.