ಬೆಂಗಳೂರು: ರಾಜ್ಯ ಸರ್ಕಾರದ ಬಳಿ ಗ್ಯಾರಂಟಿ ಯೋಜನೆಗಳಿಗೆ ಹಣ ಇಲ್ಲ ಎಂದು ವಿರೋಧ ಪಕ್ಷಗಳು ವಿರೋಧಿಸುತ್ತಲೇ ಇವೆ. ಈ ಮಧ್ಯೆ ಸಿಎಂ ಗ್ಯಾರಂಟಿ ಯೋಜನೆ ಬಗ್ಗೆ ಹೇಳಿದ್ದಾರೆ.
ಪರಿಷತ್ ಕಲಾಪದಲ್ಲಿ ಮಾತನಾಡಿದ ಅವರು, ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಹಣ ಜನವರಿಯಿಂದ ಕೊಡಬೇಕಾಗಿದ್ದು, ಶೀಘ್ರದಲ್ಲೇ ಅದನ್ನು ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.
ಪ್ರಣಾಳಿಕೆಯಲ್ಲಿ ಹೇಳಿದಂತೆ 2026-27ನೇ ಸಾಲಿಗೆ 7 ರೂ. ಹಾಲಿನ ಪ್ರೋತ್ಸಾಹ ಧನ ಸಹ ಕೊಡುತ್ತೇವೆ. ಪ್ರಸಕ್ತ ವರ್ಷದಲ್ಲಿ ಶೇ.50 ರೈತರ ಆತ್ಮಹತ್ಯೆಗಳು ಕಡಿಮೆಯಾಗಿದೆ. ಫೆಬ್ರವರಿ ಅಂತ್ಯಕ್ಕೆ 640 ಮಂದಿ ರೈತರ ಆತ್ಮಹತ್ಯೆಯಾಗಿದ್ದು, ಇದು ಬಿಜೆಪಿ ಆಡಳಿತದ ಅವಧಿಗಿಂತ ಕಡಿಮೆಯಾಗಿದೆ ಎಂದಿದ್ದಾರೆ.