Gruha Lakshmi: ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗಿಲ್ಲ ಅಂತಾ ಮಹಿಳೆಯರು ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದಾರೆ. ಆದರೆ, ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿ ಸುದ್ದಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ನಾವು 2 ಸಾವಿರ ರೂಪಾಯಿ ಹೆಚ್ಚಿಸಿದ್ದೇವೆ. ಆನಂತರ ಬಂದ ಸರ್ಕಾರಗಳು ಗೌರವಧನ ಏರಿಕೆ ಮಾಡಿರಲಿಲ್ಲ. ಆದರೆ, ಈ ಬಾರಿಯ ಬಜೆಟ್ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 1,000 ರೂಪಾಯಿ ಹಾಗೂ ಸಹಾಯಕಿಯರ ಗೌರವಧನವನ್ನು 750 ರೂಪಾಯಿ ಹೆಚ್ಚಳ ಮಾಡುವುದಾಗಿ ಘೋಷಿಸಲಾಗಿದೆ ಎಂದಿದ್ದಾರೆ.
ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಆಗಲಿದೆ ಎಂದು ಈ ವೇಳೆ ಮಹಿಳೆಯರಿಗೆ ಶುಭ ಸುದ್ದಿ ನೀಡಿದ್ದಾರೆ.