ಐಪಿಎಲ್ 2025ರ ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ 6 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಪೈಕಿ ಐವರು ಕ್ಯಾಪ್ಟ್ ಪ್ಲೇಯರ್ಸ್ ಇದ್ದರೆ, ಓರ್ವ ಅನ್ ಕ್ಯಾಪ್ಡ್ ಆಟಗಾರ ಇದ್ದಾರೆ.
ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಹಾರ್ದಿಕ್ ಪಾಂಡ್ಯ ಅವರನ್ನು ನಾಯಕ ಸ್ಥಾನದಲ್ಲಿ ಉಳಿಸಿಕೊಂಡಿದೆ. ಹೀಗಾಗಿ ಮುಂದಿನ ಸೀಸನ್ ನಲ್ಲೂ ಅವರೇ ನಾಯಕರಾಗಿ ಉಳಿಯಲಿದ್ದಾರೆ.
ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಐಪಿಎಲ್ 2025 ರಲ್ಲೂ ತವರು ತಂಡದ ಪರ ಕಣಕ್ಕೆ ಇಳಿಯಲಿದ್ದಾರೆ. ಈ ಹಿಂದೆ ಹಿಟ್ ಮ್ಯಾನ್ ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರೆ ಎಂಬ ಸುದ್ದಿಯಾಗಿತ್ತು. ಆದರೆ, ಈಗ ತಂಡದಲ್ಲೇ ಉಳಿಸಲು ಬಯಸಿದ್ದಾರೆ.
ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಪ್ರಮುಖ ವೇಗಿಯಾಗಿ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ತಂಡದಲ್ಲೇ ಉಳಿದಿದ್ದಾರೆ. ಹೀಗಾಗಿ ಬುಮ್ರಾ ತಂಡದಲ್ಲೇ ಉಳಿಯಲಿದ್ದಾರೆ. ಭಾರತದ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕೂಡ ತಂಡದಲ್ಲೇ ರಿಟೈನ್ ಆಗಿದ್ದಾರೆ. ಹೀಗಾಗಿ ಸೂರ್ಯ ಆರ್ಭಟ ಕೂಡ ಈ ಬಾರಿಯೂ ಮುಂದುವರೆಯಲಿದೆ.
ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಯುವ ಎಡಗೈ ದಾಂಡಿಗ ತಿಲಕ್ ವರ್ಮಾರನ್ನು ಸಹ ತಂಡದಲ್ಲೇ ಉಳಿಸಿಕೊಂಡಿದೆ. ಮುಂಬೈ ಇಂಡಿಯನ್ಸ್ ಅನ್ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ 24 ವರ್ಷದ ಆಲ್ರೌಂಡರ್ ನಮನ್ ಧಿರ್ ಅವರನ್ನು ರಿಟೈನ್ ಮಾಡಿಕೊಂಡಿದೆ. ನಮನ್ ಧಿರ್ ಕಳೆದ ಸೀಸನ್ನಲ್ಲಿ ಮುಂಬೈ ಪರ 7 ಪಂದ್ಯಗಳನ್ನಾಡಿದ್ದರು.