ಕಾರವಾರ: ದಸರಾ ಹಬ್ಬದ ವೇಳೆಗೆ ಸಿಎಂ ಬದಲಾವಣೆಯಾಗುತ್ತಾರೆ ಎಂಬ ಹೇಳಿಕೆ ವಿಚಾರವಾಗಿ ಶಾಸಕ ಆರ್.ವಿ. ದೇಶಪಾಂಡೆ ಮಾತಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರ್ರೀ ಆರ್ ಅಶೋಕ್. ಪಾಪ ಬಡಪಾಯಿರೀ ಅಶೋಕ್. ಆತ ನಿದ್ದೆಗಣ್ಣಲ್ಲಿ ಮಾತನಾಡಿರಬೇಕು. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುವುದಿಲ್ಲ. ನಮ್ಮ ಸರ್ಕಾರ ಮುಂದಿನ ಐದು ವರ್ಷ ಸುಭದ್ರವಾಗಿರುತ್ತದೆ. ನಮ್ಮಲ್ಲಿ ಯಾವುದೇ ತೊಂದರೆ ಇಲ್ಲ. ಎಲ್ಲವೂ ಸರಿಯಾಗಿದೆ. ಬಿಜೆಪಿಯವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ. ಅವರಲ್ಲೇ ಅಸಮಾಧಾನವಿದೆ ಎಂದಿದ್ದಾರೆ.