ಮುಂಬಯಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಜಯ ಸಾಧಿಸಿದೆ. ಈಗ ಮಹಾಯುತಿಯಲ್ಲಿ ಯಾರು ಸಿಎಂ ಆಗುತ್ತಾರೆ ಎಂಬ ಚರ್ಚೆ ಶುರುವಾಗಿದೆ. ಹಲವಾರು ನಾಯಕರು ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಜಾತಿ ಸಮೀಕರಣ, ಮರಾಠ, ಒಬಿಸಿ ಸಮುದಾಯಗಳ ಆಧಾರದ ಮೇಲೆ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.
ಸಿಎಂ ರೇಸ್ ನಲ್ಲಿ ಮುಂದಿದ್ದಾರೆ. ಅಲ್ಲದೇ, ಹಾಲಿ ಸಿಎಂ ಏಕನಾಥ್ ಶಿಂಧೆ, ಎನ್ ಸಿಪಿಯ ಅಜಿತ್ ಪವಾರ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಮೈತ್ರಿಕೂಟದಲ್ಲಿ ಅತ್ಯಧಿಕ 133 ಸ್ಥಾನ ಗಳಿಸಿರುವ ಬಿಜೆಪಿ ನಾಯಕರೇ ಮುಖ್ಯಮಂತ್ರಿ ಆಗಬೇಕು ಎಂಬುವುದು ಪಕ್ಷದ ವಾದವಾಗಿದೆ. ಹೀಗಾಗಿ ದೇವೇಂದ್ರ ಫಡ್ನವಿಸ್ ಅವರಿಗೆ ಹೆಚ್ಚಿನ ಅವಕಾಶವಿದೆ.
ಆದರೆ, ಮರಾಠ ಸಮುದಾಯದ ಬೆಂಬಲ ಹಿಡಿದಿಟ್ಟುಕೊಳ್ಳಲು ಶಿಂಧೆಯನ್ನೇ ಮುಂದುವರಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದಲ್ಲಿ, ಫಡ್ನವಿಸ್ ಮತ್ತೆ ಡಿಸಿಎಂ ಸ್ಥಾನಕ್ಕೆ ತೃಪ್ತಿ ಪಡಬೇಕಾಗಬಹುದು. ಚುನಾವಣಾ ಆಯೋಗದಿಂದ ನೂತನ ಶಾಸಕರ ಪಟ್ಟಿ ರಾಜ್ಯಪಾಲರಿಗೆ ಸಲ್ಲಿಕೆಯಾಗಿದೆ. ಸದ್ಯದಲ್ಲೇ ಎಲ್ಲ ಚರ್ಚೆಗೂ ತೆರೆ ಬೀಳಲಿದೆ.