ನಾನು ದೆಹಲಿಗೆ ಹೋಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟನೆ ನೀಡಿದ ಅವರು, ನಾನು ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶಿರಡಿ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿದ್ದೆ.
ಆದರೆ, ಕೆಲವು ಮಾಧ್ಯಮಗಳಲ್ಲಿ ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಕುರಿತು ವರದಿಯಾಗಿದೆ. ಆದರೆ, ಇದು ಸತ್ಯಕ್ಕೆ ದೂರವಾದ ಮಾತು. ನಾನು ಖಾಸಗಿ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಬೇರೆ ಬೇರೆ ಕಡೆ ಸಂಚರಿಸುತ್ತಿದ್ದೇನೆ. ಇದಕ್ಕೆ ರಾಜಕೀಯ ತಿರುವು ನೀಡುವುದು ಬೇಡ ಎಂದಿದ್ದಾರೆ.


















