ಮೈಸೂರು: ನಾನು ಈಗ ಪ್ರಜ್ವಲ್ ನನ್ನು (Prajwal Revanna) ಭೇಟಿ ಮಾಡುವುದಿಲ್ಲ ಎಂದು ರೇವಣ್ಣ (HD Revanna) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸದ್ಯಕ್ಕೆ ಅವನ ಭೇಟಿಗೆ ಹೋಗುವುದಿಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೋಟ್ಟ ಅಂತಾ ಹೇಳುತ್ತಾರೆ. ಹೀಗಾಗಿ ನಾನು ಹೋಗಲ್ಲ. ನನಗೆ ಹಾಗೂ ನನ್ನ ಕುಟುಂಬಕ್ಕೆ ಈಗ ದೇವರನ್ನು ಬಿಟ್ಟರೆ ಬೇರೆ ಯಾರೂ ಇಲ್ಲ. ನನ್ನ ಪತ್ನಿ ಹೋಗಿದ್ದಾರೆ, ಮಗ ಅಲ್ವ ಹೀಗಾಗಿ ಹೋಗಿದ್ದಾರೆ ಅಷ್ಟೇ. ತಾಯಿ-ಮಗ ಏನು ಮಾತಾಡಿದ್ದಾರೆ ನನಗೆ ಗೊತ್ತಿಲ್ಲ. ನಾನು ಅದನ್ನು ಕೇಳುವುದೂ ಇಲ್ಲ ಎಂದಿದ್ದಾರೆ.
ಸೂರಜ್ ರೇವಣ್ಣ (Suraj Revanna) ಮಹಾನ್ ದೈವ ಭಕ್ತ. ಅವನು ಬಹಳ ಬೇಗ ಇದರಿಂದ ಹೊರಬರುತ್ತಾನೆ ಎಂಬ ನಂಬಿಕೆ ಇದೆ. ನಾನು ಇನ್ನುಳಿದ ಯಾವ ವಿಷಯದ ಬಗ್ಗೆ ಮಾತನಾಡುವುದಿಲ್ಲ. ಆದರೆ, ಮುಂದೆ ಇವುಗಳ ಹಿಂದಿರುವ ಷಡ್ಯಂತ್ರದ ಕುರಿತು ಎಳೆ ಎಳೆಯಾಗಿ ಹೇಳುತ್ತೇನೆ ಎಂದು ಹೇಳಿದ್ದಾರೆ.
ದೇವೇಗೌಡರು (HD Devegowda) ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ. ಎಲ್ಲದಕ್ಕೂ ಕಾಲವೇ ಉತ್ತರಿಸಲಿದೆ. ನಾನು ಎಂದಿಗೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂತಹ ಆರೋಪ-ಪ್ರತ್ಯಾರೋಪ, ಷಡ್ಯಂತ್ರ ಎಲ್ಲವನ್ನೂ ನೋಡಿದ್ದೇನೆ ಎಂದು ಗುಡುಗಿದ್ದಾರೆ.