ಭಾರತೀಯ ಕ್ರಿಕೆಟ್ ತಂಡದ ನೂತನ ಕೋಚ್ ಹಾರ್ದಿಕ್ ಪಾಂಡ್ಯ ವಿರುದ್ಧ ತೊಡೆ ತಟ್ಟಿದಂತಿದೆ.
ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಸಹಜವಾಗಿ ಭಾರತ ತಂಡವನ್ನು ಮುನ್ನಡೆಸುವ ವ್ಯಕ್ತಿಯ ಕುರಿತು ಚರ್ಚೆಗಳು ಆರಂಭವಾಗಿದ್ದವು. ಹೀಗಾಗಿ ಉಪ ನಾಯಕನಾಗಿದ್ದ ಹಾರ್ದಿಕ್ ಪಾಂಡ್ಯ ನಾಯಕನಾಬಹುದು ಎನ್ನಲಾಗಿತ್ತು. ಆದರೆ, ಇದಕ್ಕೆ ಕೋಚ್ ಕೋಚ್ ಗೌತಮ್ ಗಂಭೀರ್ ಒಪ್ಪಿಲ್ಲ ಎನ್ನಲಾಗುತ್ತಿದೆ.
ಹೀಗಾಗಿಯೇ ಸೂರ್ಯಕುಮಾರ್ ಯಾದವ್ ಹೆಸರು ಮುಂಚೂಣಿಗೆ ಬಂದಿದೆ. ಕೋಚ್ ಗೌತಮ್ ಗಂಭೀರ್ ತೆರೆ ಮರೆಯ ಹಿಂದೆ ಕೆಲವು ವಿಷಯಗಳನ್ನು ಆಯ್ಕೆ ಸಮಿತಿ ಮುಂದೆ ಇಟ್ಟಿದ್ದಾರೆ ಎನ್ನಲಾಗಿದೆ. ಪಾಂಡ್ಯ ಅವರ ಫಿಟ್ನೆಸ್ ಸಮಸ್ಯೆ ಕೂಡ ಪ್ರಸ್ತಾಪಿಸಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪರ ಖಾಯಂ ಆಗಿ ಕಾಣಿಸಿಕೊಳ್ಳುವ ಆಟಗಾರನಿಗೆ ನಾಯಕತ್ವ ನೀಡುವಂತೆ ಗಂಭೀರ್ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ, ಎಲ್ಲಿಯೂ ಗಂಭೀರ್ ಅವರು ಸೂರ್ಯಕುಮಾರ್ ಗೆ ನಾಯಕತ್ವ ನೀಡಬೇಕೆಂದು ಹೆಸರು ಸೂಚಿಸಿಲ್ಲ ಎನ್ನಲಾಗಿದೆ. ಬದಲಾಗಿ ಹಾರ್ದಿಕ್ ಪಾಂಡ್ಯ ನಾಯಕನಾದರೆ, ಅವರೊಂದಿಗೆ ಕೆಲಸ ಮಾಡಲು ಸಾಧ್ಯವಿಲ್ಲ ಎಂಬುವುದನ್ನು ಗಂಭೀರ್ ಖಂಡತುಂಡವಾಗಿ ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರು ಹಾರ್ದಿಕ್ ಪಾಂಡ್ಯ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಈ ಬೆಳವಣಿಗೆ ಗಮನಿಸಿದರೆ ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಆಯ್ಕೆಯಾಗುವುದು ಬಹುತೇಕ ಖಚಿತ. ಏಕದಿನ ಮತ್ತು ಟೆಸ್ಟ್ ತಂಡಗಳ ನಾಯಕನಾಗಿ ರೋಹಿತ್ ಶರ್ಮಾ ಮುಂದುವರೆಯಲಿದ್ದಾರೆ.
