ಬೆಂಗಳೂರು: ಕುಮಾರಸ್ವಾಮಿ ವಿರುದ್ಧ ಜಮೀರ್ ಮಾತನಾಡಿದ್ದಾರೆಂದು ಜೆಡಿಎಸ್ ಆರೋಪಿಸುತ್ತಿದೆ. ಆದರೆ, ಕುಮಾರಸ್ವಾಮಿ ಯಾಕೆ ಮೌನ ವಹಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಗೆ ಸೋಲಿನ ಭಯ ಕಾಡುತ್ತಿದೆ. ಹೀಗಾಗಿ ಕುಮಾರಸ್ವಾಮಿ ಮೌನ ವಹಿಸಿದ್ದಾರೆ. ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಪುತ್ರ ಸೋಲುವುದು ನಿಶ್ಚಿತ ಎಂದಿದ್ದಾರೆ.
ಕಾಮಗಾರಿಗಳಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡುವ ವಿಚಾರದ ಕುರಿತು ಮಾತನಾಡಿರುವ ಅವರು, ಅಂತಹ ಪ್ರಸ್ತಾವನೆ ಇದುವರೆಗೂ ಸರ್ಕಾರದ ಮುಂದೆ ಬಂದಿಲ್ಲ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸೃಷ್ಟಿ ಮಾಡಿರುವ ಸುದ್ದಿ ಅಷ್ಟೇ ಇದೆ. ಚುನಾವಣೆಯಲ್ಲಿ ಸೋಲುವುದು ನಿಶ್ಚಿತ ಅಂತ ಖಾತರಿಯಾಗಿದೆ. ಹೀಗಾಗಿ ಈ ರೀತಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.