ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇನ್ನೂ ಹಲವೆಡೆ ಮಳೆರಾಯನ ಅಬ್ಬರ ನಿಲ್ಲುತ್ತಿಲ್ಲ. ಹೀಗಾಗಿ ಮುಂಜಾಗೃತಾ ಕ್ರಮವಾಗಿ ಜುಲೈ 26 ಹಾಗೂ 27ರಂದು ಹಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ(School Holiday).
ಧಾರವಾಡ, ಬೆಳಗಾವಿ, ಕೊಡಗು, ಹಾವೇರಿ ಜಿಲ್ಲೆಗಳಲ್ಲಿ ಮಳೆಯ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ವ್ಯಾಪಕ ಮಳೆಯ ಹಿನ್ನೆಲೆ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ. ಜಿಲ್ಲೆಯ ಎಂಟು ತಾಲೂಕುಗಳಿಗೆ ರಜೆ ಘೋಷಿಸಲಾಗಿದೆ..
ಧಾರವಾಡ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು ನಾಳೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಮಕ್ಕಳಸುರಕ್ಷತೆ ದೃಷ್ಟಿಯಿಂದ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.
ಹಾವೇರಿ ಜಿಲ್ಲಾದ್ಯಂತ ಬಿಟ್ಟು ಬಿಡದೆ ಮಳೆ ಸುರಿಯಿತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜುಲೈ 26 ಮತ್ತು 27 ಎರಡು ದಿನ ರಜೆ ಘೋಷಿಸಲಾಗಿದೆ. ಅಂಗನವಾಡಿ , ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿ ಮಾತ್ರ ರಜೆ ನೀಡಿ ಜಿಲ್ಲಾಧಿಕಾರಿ ವಿಜಯಮಹಾಂತೇಶ್ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
