ಬೆಂಗಳೂರು: ರಾಜ್ಯಕ್ಕೆ ಇಂದು ಕೂಡ ಮಳೆಯ ಮುನ್ಸೂಚನೆ ಇದೆ. ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಭಾನುವಾರ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಹಲವೆಡೆ ಜನ -ಜೀವನ ಅಸ್ತವ್ಯಸ್ಥಗೊಂಡಿದೆ. ಮಳೆರಾಯನ ಅವಾಂತರಕ್ಕೆ ಹಲವೆಡೆ ರೈತರು ಸಾಕಷ್ಟು ತೊಂದರೆ ಹಾಗೂ ನಷ್ಟ ಅನುಭವಿಸಿದ್ದಾರೆ. ಭಾನುವಾರ ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿತ್ತು.