ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗಿದ್ದು, ಮುಂದಿನ 5 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೋಮವಾರ ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ನಾಳೆ ಶಿವಮೊಗ್ಗ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತಾ ಕ್ರಮವಾಗಿ ಆಗಸ್ಟ್ 18 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.