ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಬ್ಬರಿಸಿ ಅವಾಂತರ ಸೃಷ್ಟಿಸಿದ್ದ ಮಳೆರಾಯ ಇತ್ತೀಚೆಗೆ ಕೆಲವು ದಿನಗಳಿಂದ ವಿಶ್ರಾಂತಿ ಪಡೆಯುತ್ತಿದ್ದ. ಆದರೆ, ಈಗ ಮತ್ತೆ ಮಳೆಯ ಮುನ್ಸೂಚನೆ ಸಿಕ್ಕಿದ್ದು, ಹಲವೆಡೆ ಆತಂಕ ವ್ಯಕ್ತವಾಗುತ್ತಿದೆ.
ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ರೈತರಿಗೆ ಆತಂಕ ಶುರುವಾಗಿದೆ.
ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಮಂಡ್ಯ, ಚಾಮರಾಜನಗರ, ಮೈಸೂರು, ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 11 ರ ನಂತರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ನ. 12 ರ ನಂತರ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.