ರಾಜ್ಯದಲ್ಲಿ ಸುರಿಯುತ್ತಿರುವ ಹಿಂಗಾರು ಮಳೆಯಿಂದಾಗಿ ಈಗಾಗಲೇ ಜನರು ಹೈರಾಣಾಗಿದ್ದಾರೆ. ಆದರೂ ಮಳೆರಾಯ ಮಾತ್ರ ವಿಶ್ರಾಂತಿ ಪಡೆಯುತ್ತಿಲ್ಲ. ಹಲವೆಡೆ ಮಳೆಯಿಂದಾಗಿ ಜನ – ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಈಗ ಇನ್ನೂ 5 ದಿನ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಭಾರತದಾದ್ಯಂತ ತಂಪಾದ ವಾತಾವರಣ ನಿರ್ಮಾಣವಾಗಲಿದ್ದು, ಬಿಸಿಲಿನ ಪ್ರಮಾಣ ಹೆಚ್ಚಾಗಲಿದೆ. ಆದರೆ, ದಕ್ಷಿಣ ಭಾಗದಲ್ಲಿ ಮಾತ್ರ ಇನ್ನೂ ಕೆಲವು ದಿನಗಳವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ನ್ನು ಗಂಟೆಗೆ 35-45 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಮೀನುಗಾರರು ಅರಬ್ಬಿ ಸಮುದ್ರಕ್ಕೆ ಹೋಗದಂತೆ ಸೂಚನೆ ನೀಡಲಾಗಿದೆ.
ಅಕ್ಟೋಬರ್ 21ರಿಂದ 25ರ ವರೆಗೆ ಕರ್ನಾಟಕ, ತಮಿಳುನಾಡು, ಕೇರಳ, ಒಡಿಶಾ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರೀ ಮಳೆ ಎಚ್ಚರಿಕೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ರಾಜ್ಯದ ಜನರು ಇನ್ನೂ ಐದು ದಿನ ಮಳೆರಾಯನಿಂದ ಸಂಕಷ್ಟ ಅನುಭವಿಸಲೇಬೇಕಿದೆ.