ಚಿಕ್ಕಮಗಳೂರು: ಜಿಲ್ಲೆಯ ಹೆನ್ನಂಗಿಯಲ್ಲಿ ಕಾಡಾನೆ ದಾಳಿಗೆ ರೈತ ಕೃಷ್ಣಮೂರ್ತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ರೈತ ಒಕ್ಕೂಟ ಕರೆ ನೀಡಿದ್ದ ಎನ್.ಆರ್. ಪುರ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಬಂದ್ ಹಿನ್ನೆಲೆಯಲ್ಲಿ ಎನ್.ಆರ್. ಪುರ ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿವೆ. ಮೆಡಿಕಲ್ ಹಾಗೂ ಆಸ್ಪತ್ರೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಂಗಡಿಗಳು ಬಂದ್ ಆಗಿವೆ. ರೈತ ಒಕ್ಕೂಟದ ಈ ಬಂದ್ ಕರೆಗೆ ಹಲವು ಸಂಘ ಸಂಸ್ಥೆಗಳು ಕೂಡ ಬೆಂಬಲ ನೀಡಿವೆ.

















