ರಾಮನಗರ: ಕೌಟುಂಬಿಕ ಕಲಹ ಮತ್ತು ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ ಪತ್ನಿಯನ್ನು ಚಾಕುವಿನಿಂದ ಇರಿದು ಪತಿಯು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಮನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಯಾರಬ್ ನಗರದಲ್ಲಿ ನಡೆದ ಈ ಘಟನೆ ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸಿದೆ. ಮೃತ ಯುವತಿಯನ್ನು ಸೋಫಿಯಾ ಬಾನು(21) ಎಂದು ಗುರುತಿಸಲಾಗಿದೆ. ಪತಿ ಸಲ್ಮಾನ್ (22) ಹತ್ಯೆ ನಡೆಸಿದ ಆರೋಪಿಯಾಗಿದ್ದು, ಘಟನೆ ಬಳಿಕ ತಾನೇ ಪೊಲೀಸರಿಗೆ ಶರಣಾಗಿದ್ದಾನೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ದಂಪತಿಗಳ ನಡುವೆ ಕೆಲ ದಿನಗಳಿಂದ ಕೌಟುಂಬಿಕ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ವಾಗ್ವಾದ ತೀವ್ರಗೊಂಡು, ಕೋಪದಲ್ಲಿ ಆರೋಪಿ ಚಾಕುವಿನಿಂದ ಪತ್ನಿಗೆ ಇರಿದಿದ್ದಾನೆ ಎನ್ನಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ರಾಮನಗರ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಇದನ್ನೂ ಓದಿ : ಕಾಫಿ ತೋಟದಲ್ಲಿ ಕಾಡಾನೆ ಬಿಂದಾಸ್ ರೌಂಡ್ಸ್ | ಸ್ಥಳೀಯರಲ್ಲಿ ಆತಂಕ



















