ವಿಜಯಪುರ: ಬುದ್ಧಿವಾದ ಹೇಳಿದ್ದಕ್ಕೆ ಪತ್ನಿಯೇ ಪತಿಗೆ ಚಾಕು ಇರಿದಿರುವ ಘಟನೆ ನಡೆದಿದೆ.
ನಗರದಲ್ಲಿ ಈ ಘಟನೆ ನಡೆದಿದೆ. ಪತ್ನಿ ತೇಜು ರಾಠೋಡ್ ಎಂಬ ಮಹಿಳೆ ತನ್ನ ಪತಿ ಅಜಿತ್ ಗೆ ಚಾಕು ಇರಿದಿದ್ದಾಳೆ. ಪತಿ ಗಾಢ ನಿದ್ರೆಯಲ್ಲಿದ್ದಾಗ ಚಾಕುವಿನಿಂದ ಕತ್ತಿಗೆ ಬಲವಾಗಿ ಇರಿದಿದ್ದಾಳೆ ಎನ್ನಲಾಗಿದೆ.
ಚಾಕು ಇರಿಯುತ್ತಿದ್ದಂತೆ ಅಜಿತ ಕೂಗಿದ್ದಾರೆ. ಕೂಡಲೇ ಕುಟುಂಬಸ್ಥರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪತ್ನಿ ಯಾವಾಗಲೂ ಫೋನ್ ನಲ್ಲೇ ಇರುತ್ತಿದ್ದಳು ಎನ್ನಲಾಗಿದೆ. ಹೀಗಾಗಿ ಪತಿ ಬುದ್ಧಿವಾದ ಹೇಳಿದ್ದಾನೆ. ಇದಕ್ಕೆ ಕೋಪಗೊಂಡು ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ. ಆದರ್ಶನಗರ ಪೊಲೀಸರು ತೇಜುಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.