ಹಾಸನ: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಸುಳ್ಳಕ್ಕಿ ಗ್ರಾಮದಲ್ಲಿ ನಡೆದಿದೆ.
ಸುಮಾರು 15 ವರ್ಷದ ಒಂಟಿ ಸಲಗ ಸಾವನ್ನಪ್ಪಿದೆ. ತೋಟದಿಂದ ರಸ್ತೆ ದಾಟುವಾಗ ಸೊಂಡಿಲಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿರುವ ಒಂಟಿ ಸಲಗವನ್ನು ನೋಡಲು ನೂರಾರು ಜನರು ದೌಡಾಯಿಸಿದ್ದರು. ಇದೇ ವೇಳೆ ಸ್ಥಳಕ್ಕೆ ಆರ್ ಎಫ್ ಒ ಹೇಮಂತ್ ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.