ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆ ಚುರುಕು ಪಡೆದುಕೊಂಡಿದೆ. ಸಿಐಡಿ ಡಿವೈಎಸ್‌ಪಿ ಉಮೇಶ್ ನೇತೃತ್ವದಲ್ಲಿ ನಡೆಯುತ್ತಿದ್ದು, ಈಗಾಗಲೇ ಘಟನಾ ಸ್ಥಳಕ್ಕೆ ತನಿಖಾಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ದೂರುದಾರ ತಾಯಿ ವಿಜಯಲಕ್ಷ್ಕೀ ಸೇರಿದಂತೆ ಕುಟುಂಬಸ್ಥರ ಹೇಳಿಕೆಯನ್ನು ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಇನ್ನು ಹೆಚ್ಚಿನ ವಿಚಾರಣೆಗಾಗಿ ಕಿರಣ್ ಸೇರಿದಂತೆ ಕೆಲ ಆರೋಪಿಗಳನ್ನ ಸಿಐಡಿ ಕಸ್ಟಡಿಗೆ ಪಡೆಯುವ ಸಾಧ್ಯತೆ. ಅಲ್ಲದೆ ಎರಡ್ಮೂರು ದಿನಗಳಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ನೋಟಿಸ್ ಕೊಡಲು ಅಧಿಕಾರಿಗಳು ತಯಾರಿ ನಡೆಸಿದ್ದಾರೆ.