ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ಇಡಿ ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಮೈಸೂರಿನ ಮುಡಾ ಕಚೇರಿ ಹಾಗೂ ಬೆಂಗಳೂರಿನ ಕೆಂಗೇರಿ ಉಪನಗರದ ಜಮೀನಿನ ಮೂಲ ಮಾಲೀಕ ದೇವರಾಜು ಮನೆಗೆ ಭೇಟಿ ಕೊಟ್ಟಿರುವ ಇಡಿ ಅಧಿಕಾರಿಗಳು ವಿಚಾರಣೆ ಹಾಗೂ ಪರಿಶೀಲನೆ ನಡೆಸಿದ್ದಾರೆ. ನಂತರ ಸಿಎಂ ಹಾಗೂ ಅವರ ಪತ್ನಿಯನ್ನು ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಮೈಸೂರಿನ ಮುಡಾ ಕಚೇರಿ ಹಾಗೂ ಇತರೆಡೆಗಳಲ್ಲಿ ದಾಳಿ ನಡೆಸುವ ಮೂಲಕ ಇಡಿ ತನಿಖೆ ಚುರುಕುಗೊಳಿಸಿದೆ. 14 ನಿವೇಶಗಳನ್ನು ಸಿಎಂ ಪತ್ನಿ ಮುಡಾಗೆ ಹಿಂದಿರುಗಿಸಿದ್ದರೂ ವಿಚಾರಣೆ ಅನಿವಾರ್ಯ ಎನ್ನಲಾಗಿದೆ.