ಬೆಳಗಾವಿ: ಅಡವಿಸಿದ್ದರಾಮ ಸ್ವಾಮೀಜಿ ಮೇಲಿನ ಆರೋಪ ಸತ್ಯಕ್ಕೆ ದೂರವಾಗಿದ್ದು, ಅವರು ಸದ್ಯದಲ್ಲೇ ಮಠಕ್ಕೆ ಬರುತ್ತಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಗೋಕಾಕ್ ನಗರದಲ್ಲಿ ಅವರು ಮಾತನಾಡಿದ್ದಾರೆ. ಮಠದಲ್ಲಿ ಸ್ವಾಮೀಜಿ ಮಹಿಳೆ ಜೊತೆ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ್ ಶೂನ್ಯ ಸಂಪಾದನ ಮಠದಲ್ಲಿ ಮಹತ್ವದ ಸಭೆ ನಡೆದಿದೆ. 13 ಜನ ಮಠಾದೀಶರು, ಗ್ರಾಮಸ್ಥರು ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಭಾಗವಹಿಸಿದ್ದರು. ಈ ವೇಳೆ ಸ್ವಾಮೀಜಿ ಮೇಲಿನ ಆರೋಪ ಸುಳ್ಳು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಮರಳಿ ಮಠಕ್ಕೆ ಆಹ್ವಾನಿಸಲು ಸಿದ್ಧತೆ ನಡೆದಿದೆ.