ವಿಜಯಪುರ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರೆಸ್ಸೆಸ್ ಬ್ಯಾನ್ ಮಾಡುತ್ತೇವೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರವಾಗಿ ಸಂಸದ ರಮೇಶ ಜಿಗಜಿಣಗಿ ಮಾತನಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಾ? ಎಂದು ಪ್ರಶ್ನಿಸಿ ವ್ಯಂಗ್ಯವಾಡಿದ್ದಾರೆ. ಮುಂದೆ ದೇಶದಲ್ಲಿ ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಕಾಂಗ್ರೆಸ್ ನಲ್ಲಿ ನಾಯಕತ್ವದ ಕೊರತೆ ಇದೆ. ಬಿಜೆಪಿ 11 ವರ್ಷಗಳಲ್ಲಿ ಏನೇನು ಅಭಿವೃದ್ಧಿ ಮಾಡಿದೆ ಎಂಬುವುದು ಎಲ್ಲರಿಗೂ ಗೊತ್ತಿದೆ. ಇದನ್ನು ಮೀರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದಿದ್ದಾರೆ.
ಕಾಂಗ್ರೆಸ್‌ಗೆ ಮೈನಾರಿಟಿ, ಹರಿಜನರು ಬ್ಯಾಕ್ ವರ್ಡ್ ಕ್ಲಾಸ್ ಎನ್ನುವದು ಅವರ ತಲೆಯಲ್ಲಿ ಇದೆ. ಇವರು ರಾಜ್ಯದಲ್ಲಿಯೂ ಮತ್ತೆ ಅಧಿಕಾರಕ್ಕೆ ಬರಲ್ಲ. ಪ್ರಿಯಾಂಕ್ ಖರ್ಗೆ ಇನ್ನೂ ಸಣ್ಣ ಹುಡುಗ. ಅವನಿಗೆ ಇನ್ನೂ ಮ್ಯಾಚ್ಯೂರಿಟಿ ಇಲ್ಲಾ ಎಂದಿದ್ದಾರೆ.