ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಮತ್ತೆ ಬೆಂಗಳೂರಿಗೆ ಶಿಫ್ಟ್ ಆಗ್ತಾರಾ? ಎಂಬ ಮಾತುಗಳು ಕೇಳಿ ಬರುತ್ತಿವೆ.
ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲೇ ಇದ್ದರು. ಆದರೆ, ಅಲ್ಲಿ ಐಷಾರಾಮಿ ಜೀವನ ನಡೆಸುತ್ತಿರುವುದು ಬೆಳಕಿಗೆ ಬರುತ್ತಿದ್ದಂತೆ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಈಗ ದರ್ಶನ್ ನನ್ನು ಬಳ್ಳಾರಿ ಜೈಲಿನಿಂದ ಮತ್ತೆ ಬೆಂಗಳೂರಿಗೆ ವರ್ಗಾವಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ದರ್ಶನ್ ಜೈಲು ಸೇರಿದಾಗಿನಿಂದ ಕಿರಿಕ್ ಮಾಡುತ್ತಿದ್ದಾರೆ. ಜೈಲಿನಲ್ಲಿ ತಮಗೆ ದೊರಕುತ್ತಿರುವ ಸೌಲಭ್ಯಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಾ, ಜೈಲು ಅಧಿಕಾರಿಗಳ ಜೊತೆಗೆ ವಾದ ಮಾಡುತ್ತಿದ್ದಾರೆ. ನ್ಯಾಯಾಲಯದಲ್ಲಿಯೂ ಮನವಿಗಳನ್ನು ಸಲ್ಲಿಸುತ್ತಲೇ ಬಂದಿದ್ದಾರೆ. ಬೆಂಗಳೂರಿನಲ್ಲಿದ್ದಾಗಲೇ ವಿಶೇಷ ಸೌಕರ್ಯಕ್ಕಾಗಿ ಮನವಿ ಮಾಡುತ್ತಿದ್ದರು. ಈಗ ಬಳ್ಳಾರಿಯಲ್ಲಂತೂ ಕಠಿಣ ದಿನಗಳನ್ನು ಅನುಭವಿಸುತ್ತಿದ್ದಾರೆ. ಹೀಗಾಗಿ ಕಿರಿಕ್ ಮಾಡುತ್ತಲೇ ಇದ್ದಾರೆ.
ಬಳ್ಳಾರಿಗೆ ಬಂದ ನಂತರ ಅವರ ಆರೋಗ್ಯದಲ್ಲಿಯೂ ವ್ಯತ್ಯಾಸ ಕಂಡು ಬರುತ್ತಿದೆ. ಈಗ ಬೆನ್ನು ನೋವು ಉಲ್ಬಣಗೊಂಡಿದ್ದು, ವೈದ್ಯರು ಶಸ್ತ್ರ ಚಿಕಿತ್ಸೆಗೆ ಸಲಹೆ ನೀಡಿದ್ದಾರೆ. L1 , L5 ಭಾಗದಲ್ಲಿ ಊತ ಇರುವುದಾಗಿ ವೈದ್ಯರು ಹೇಳಿದ್ದಾರೆ. ಆದರೆ, ಬಳ್ಳಾರಿಯಲ್ಲಿ ಚಿಕಿತ್ಸೆಗೆ ಒಳಗಾಗಲು ದರ್ಶನ್ ಹಿಂದೇಟು ಹಾಕುತ್ತಿದ್ದಾರೆ. ಬೆಂಗಳೂರಿನಲ್ಲಿ ಮಾಡಿಸಬೇಕೆಂದು ಮನವಿ ಇಟ್ಟಿದ್ದಾರೆ. ಹೀಗಾಗಿ ಸದ್ಯದ ಸ್ಥಿತಿ ಗಮನಿಸಿದರೆ, ಮೆಡಿಕಲ್ ಎಮರ್ಜೆನ್ಸಿಗಾಗಿ ದರ್ಶನ್ ಬಳ್ಳಾರಿಗೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ.