ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು (Terror Attack) ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದಂತೆ ಹಲವು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಹೇಯ ಕೃತ್ಯವನ್ನು ಎಂದಿಗೂ ಸಹಿಸುವುದಿಲ್ಲ. ನಾವು ಸುಮ್ಮನೆ ಇರುವುದಿಲ್ಲ ಎಂದಿದ್ದಾರೆ.
ಈ ಹೇಯ ಕೃತ್ಯದ ಹಿಂದಿರುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಪೋಸ್ಟ್ನಲ್ಲಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ನೆರವು ನೀಡಲಾಗುತ್ತಿದೆ. ಈ ಹೇಯ ಕೃತ್ಯದ ಹಿಂದಿರುವ ಉಗ್ರರನ್ನು ಸುಮ್ಮನೆ ಬಿಡಲ್ಲ. ಅವರ ದುಷ್ಟ ಅಜೆಂಡಾ ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಗುಡುಗಿದ್ದಾರೆ.