ನಟ ದರ್ಶನ್ ಆಪ್ತ ಗೆಳತಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿಯ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದಾರೆ. ಜೈಲು ಸೇರಿ 5 ತಿಂಗಳಾದರೂ ಪವಿತ್ರಾ ಗೌಡ ಅವರಿಗೆ ಜಾಮೀನು ಸಿಕ್ಕಿಲ್ಲ. ಈಗ ಮತ್ತೆ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು, ಗುರುವಾರ ವಿಚಾರಣೆ ನಡೆಯಲಿದೆ.
ಕೆಲವೇ ದಿನಗಳ ಹಿಂದೆ ದರ್ಶನ್ ಅವರಿಗೆ ತೀವ್ರ ಅನಾರೋಗ್ಯ ಇರುವದರಿಂದಾಗಿ ಜಾಮೀನು ನೀಡಲಾಗಿತ್ತು. ಆದರೆ ಅವರ ಗೆಳತಿ ಪವಿತ್ರಾ ಗೌಡ ಇನ್ನೂ ಜೈಲಿನಲ್ಲಿದ್ದಾರೆ. ಅವರ ಅರ್ಜಿಯ ವಿಚಾರಣೆ ಗುರುವಾರ ನಡೆಯಲಿದ್ದು, ಈ ಬಾರಿಯಾದರೂ ಬೇಲ್ ಸಿಗುವ ನಿರೀಕ್ಷೆಯಲ್ಲಿದ್ದಾರೆ.
ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿರುವ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಲಿದೆ. ದರ್ಶನ್, ಪವಿತ್ರಾ ಗೌಡ, ಆರ್. ನಾಗರಾಜು, ಅನುಕುಮಾರ್, ಎಂ. ಲಕ್ಷ್ಮಣ್, ಜಗದೀಶ್ ಅವರ ಜಾಮೀನು ಅರ್ಜಿ ವಿಚಾರಣೆ ಮಾಡಲಾಗುವುದು. ಅನಾರೋಗ್ಯ ಕಾರಣಕ್ಕೆ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಇಲ್ಲಿಯವರೆಗೂ ಸರ್ಜರಿ ಮಾಡಿಸಿಲ್ಲ. ಹೀಗಾಗಿ ಈ ಕುರಿತು ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಬೇಕಿದೆ.