ಹುಬ್ಬಳ್ಳಿ : ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಿದರೆ ರಸಗೊಬ್ಬರ ಕೊರತೆ ಸಮಸ್ಯೆ ನಿವಾರಣೆ ಆಗುತ್ತೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇದೆ. ಗೊಬ್ಬರ ಸರಬರಾಜು ಮಾಡುವುದು ಕೇಂದ್ರ ಸರ್ಕಾರ. ಹಂಚಿಕೆ ಮಾಡುವುದು ರಾಜ್ಯ ಸರ್ಕಾರ. ಈಗ ಎರಡು ಸರ್ಕಾರಗಳು ಕೂಡಿ ಸಮಸ್ಯೆ ಬಗೆಹರಿಸಬೇಕು ಎಂದು ಹೇಳಿದ್ದಾರೆ.
ಮಹದಾಯಿ ವಿಚಾರವಾಗಿ ಮಾತನಾಡಿದ ಅವರು, ಮಹದಾಯಿ ವಿಚಾರವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಆದಷ್ಟು ಬೇಗನೆ ಪರವಾನಗಿ ಕೊಡೋ ಕೆಲಸವನ್ನು ಕೇಂದ್ರ ಮಾಡಬೇಕು ಎಂದರು.
ಆರೆಸ್ಸೆಸ್ ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು ಎಂಬ ಶೆಟ್ಟರ್ ಹೇಳಿಕೆ ವಿಚಾರವಾಗಿ ಮಾತನಾಡಿ, ನೂರು ವರ್ಷ ಹಿಂದೆ ಆರೆಸ್ಸೆಸ್ ಇರಲಿಲ್ಲ. ಆಗ ಕೂಡ ಭಾರತ ಹಿಂದೂರಾಷ್ಟ್ರವಾಗಿತ್ತು. ಮತದಾರರನ್ನು ಹೆದರಿಸಲು ಬಿಜೆಪಿಯವರು ಆ ರೀತಿ ಹೇಳುತ್ತಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.



















