ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?

August 12, 2026
Share on WhatsappShare on FacebookShare on Twitter

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಆಗಸ್ಟ್ 13ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕ್ಷಣಗಣನೆ ಶುರುವಾಗಿದೆ. ಇದೇ ದಿನ ವಿಧಾನಸೌಧದಲ್ಲಿ ಮಳೆಗಾಲದ ಅಧಿವೇಶನವೂ ಆರಂಭವಾಗಲಿದ್ದು, ಬಂದ್‌ನ ಬಿಸಿ ಮತ್ತು ರಾಜಕೀಯ ಚರ್ಚೆ ಎರಡೂ ಒಟ್ಟಿಗೆ ಕಾವೇರಲಿವೆ.

ಆದರೆ ಬಂದ್‌ಗೆ ಇನ್ನೇನು ಒಂದೇ ದಿನ ಬಾಕಿ ಇರುವಾಗಲೇ ಕನ್ನಡಪರ ಸಂಘಟನೆಗಳ ನಡುವೆ ಒಗ್ಗಟ್ಟಿನ ಕೊರತೆ ಎದ್ದು ಕಾಣುತ್ತಿದೆ. ಕೆಲ ಸಂಘಟನೆ ನೇರ ಬೆಂಬಲ ಘೋಷಿಸಿದ್ದರೆ, ಇನ್ನೂ ಕೆಲವರು ನೈತಿಕ ಬೆಂಬಲಕ್ಕೆ ಸೀಮಿತವಾಗಿದ್ದಾರೆ. ಮತ್ತೊಂದೆಡೆ ಪ್ರಮುಖ ಸಂಘಟನೆಗಳು ಬಂದ್‌ಗೆ ವಿರೋಧ ವ್ಯಕ್ತಪಡಿಸಿರುವುದು ಗೊಂದಲಕ್ಕೆ ಕಾರಣವಾಗಿದೆ.

ಬಂದ್‌ಗೆ ನೈತಿಕ ಬೆಂಬಲ ಮಾತ್ರ

ಹೋಟೆಲ್ ಮಾಲೀಕರ ಸಂಘ, ಖಾಸಗಿ ಸಾರಿಗೆ ಸಂಘಟನೆಗಳು ಹಾಗೂ ಖಾಸಗಿ ಶಾಲೆಗಳ ಒಕ್ಕೂಟ ಬಂದ್‌ಗೆ ನೈತಿಕ ಬೆಂಬಲ ನೀಡುವುದಾಗಿ ಹೇಳಿವೆ. ಆದರೆ ತಮ್ಮ ಸೇವೆಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿವೆ. ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್, ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಮಟ್ಟ ಹೆಚ್ಚಿರುವುದು, ಸುಪ್ರೀಂ ಕೋರ್ಟ್ ಆದೇಶ ಹಾಗೂ ರಾಜ್ಯ ಸರ್ಕಾರದ ಬಂದ್ ಬೇಡ ಎಂಬ ಮನವಿಯ ಹಿನ್ನೆಲೆಯಲ್ಲಿ ನೈತಿಕ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಖಾಸಗಿ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದಿದ್ದಾರೆ. ಖಾಸಗಿ ಬಸ್ ಮಾಲೀಕರ ಸಂಘಟನೆಗಳೂ ಇದೇ ನಿಲುವು ತಳೆದಿವೆ. ಹೀಗಾಗಿ ಸಾರಿಗೆ, ಶಾಲೆ, ಹೋಟೆಲ್ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳು ಎಂದಿನಂತೆ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ.

ಇನ್ನು, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣ ಬಂದ್‌ಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದೆ. “ಈ ಹಂತದಲ್ಲಿ ಬಂದ್ ನಡೆಸುವುದು ಬೇಡ. ಪ್ರಧಾನಿ ಮಧ್ಯಪ್ರವೇಶ ಮಾಡಬೇಕು. ಬಂದ್ ನಿರ್ಧಾರದಿಂದ ಹಿಂದೆ ಸರಿಯುವಂತೆ ವಾಟಾಳ್ ನಾಗರಾಜ್ ಅವರನ್ನು ಮನವೊಲಿಸುತ್ತೇವೆ” ಎಂದು ಪ್ರವೀಣ್ ಶೆಟ್ಟಿ ತಿಳಿಸಿದ್ದಾರೆ. ಇನ್ನೊಂದೆಡೆ, ವಾಟಾಳ್ ನಾಗರಾಜ್ ಮಾತ್ರ ಯಾವುದೇ ಕಾರಣಕ್ಕೂ ಬಂದ್‌ನಿಂದ ಹಿಂದೆ ಸರಿಯುವುದಿಲ್ಲ ಎಂಬ ನಿಲುವು ತಳೆದಿದ್ದಾರೆ. ರೈತರ ಹಿತಾಸಕ್ತಿಗಾಗಿ ಬಂದ್ ನಡೆಸಿಯೇ ತೀರುತ್ತೇವೆ ಎಂದು ಹೇಳಿದ್ದು, ನಗರದ ಹಲವು ಪ್ರದೇಶಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಬಂದ್‌ಗೆ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಬಂದ್‌ಗೆ ಬೆಂಬಲ ಯಾರದ್ದು?

ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಸಂಘಟನೆಗಳ ಒಕ್ಕೂಟ.
ರಾಜ್‌ಕುಮಾರ್ ಅಭಿಮಾನಿ ಸಂಘ.
ಕನ್ನಡ ಸೇನೆ
ಕನ್ನಡ ಜಾಗೃತಿ ವೇದಿಕೆ.

ಬಂದ್‌ಗೆ ನೇರ ಬೆಂಬಲ ಇಲ್ಲದವರು :

ಕರವೇ ಪ್ರವೀಣ್ ಶೆಟ್ಟಿ ಬಣ
ಕರವೇ ಶಿವರಾಮೇಗೌಡ ಬಣ
ಕರವೇ ನಾರಾಯಣ ಗೌಡ ಬಣ
ರಾಜ್ಯ ರೈತ ಸಂಘಟನೆಗಳ ಒಕ್ಕೂಟ
ಖಾಸಗಿ ಸಾರಿಗೆ ಒಕ್ಕೂಟ
KSRTC, BMTC, ಮೆಟ್ರೋ
ಬಹುತೇಕ ಆಟೋ ಸಂಘಟನೆಗಳು
ಖಾಸಗಿ ಶಾಲೆಗಳ ಒಕ್ಕೂಟಗಳಾದ RUPSA, CAMS
ಹೋಟೆಲ್ ಅಸೋಸಿಯೇಷನ್
ಟ್ರಾವೆಲ್ಸ್ ಅಸೋಸಿಯೇಷನ್.

ಒಟ್ಟಿನಲ್ಲಿ, ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದ್ದರೂ, ಪ್ರಮುಖ ಸಂಘಟನೆಗಳ ನಡುವೆ ಒಮ್ಮತ ಮೂಡದಿರುವುದು ಬಂದ್‌ನ ಪರಿಣಾಮದ ಬಗ್ಗೆ ಭಾರೀ ಗೊಂದಲ ಸೃಷ್ಟಿಸಿದೆ. ಬಹುತೇಕ ಸೇವೆಗಳು ಎಂದಿನಂತೆ ಮುಂದುವರಿದರೆ ಬಂದ್ ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಕಾವೇರಿ ನೀರಿಗಾಗಿ ಆರಂಭವಾಗಿರುವ ಹೋರಾಟದ ಹಾದಿ ಯಾವ ದಿಕ್ಕು ಹಿಡಿಯಲಿದೆ? ಕರ್ನಾಟಕ ನಿಜಕ್ಕೂ ಬಂದ್ ಆಗುತ್ತಾ, ಅಥವಾ ಬಂದ್ ಕೇವಲ ಸಾಂಕೇತಿಕವಾಗಿಯೇ ಉಳಿಯುತ್ತಾ? ಇದಕ್ಕೆ ಆಗಸ್ಟ್ 13ರ ಬೆಳಗ್ಗೆಯೇ ಉತ್ತರ ಸಿಗಲಿದೆ.

ಇದನ್ನೂ ಓದಿ : ನೋಯ್ಡಾ ವಿಮಾನ ನಿಲ್ದಾಣ ಜಲಾವೃತ : “ಇಲ್ಲಿ ದೋಣಿಗಳು ಚಲಿಸುತ್ತಿವೆಯೇ?” ಎಂದು ಸರ್ಕಾರಕ್ಕೆ ಅಖಿಲೇಶ್ ಯಾದವ್ ಟಾಂಗ್!

Tags: Cauvery ProtestCauvery waterCauvery Water DisputeKarnataka BandhKarnataka FarmersKarnataka NewsKarnataka News beatkarnataka politicsKarnataka ProtestKarnataka ShutdownKNBWater Dispute
SendShareTweet
Previous Post

ನೋಯ್ಡಾ ವಿಮಾನ ನಿಲ್ದಾಣ ಜಲಾವೃತ : “ಇಲ್ಲಿ ದೋಣಿಗಳು ಚಲಿಸುತ್ತಿವೆಯೇ?” ಎಂದು ಸರ್ಕಾರಕ್ಕೆ ಅಖಿಲೇಶ್ ಯಾದವ್ ಟಾಂಗ್!

Next Post

ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದ ಅಮಿತ್ ಶಾ : ವೀ ಡೋಂಟ್ ಕೇರ್ ಎಂದು ಆಫರ್ ತಿರಸ್ಕರಿಸಿದ ರಾಹುಲ್ ಗಾಂಧಿ!

Related Posts

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!
ತುಮಕೂರು

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!
ಧಾರವಾಡ

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಮೈಸೂರು

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!
ಬೆಂಗಳೂರು

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!
ಬೆಂಗಳೂರು

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!

Next Post
ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದ ಅಮಿತ್ ಶಾ : ವೀ ಡೋಂಟ್ ಕೇರ್ ಎಂದು ಆಫರ್ ತಿರಸ್ಕರಿಸಿದ ರಾಹುಲ್ ಗಾಂಧಿ!

ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದ ಅಮಿತ್ ಶಾ : ವೀ ಡೋಂಟ್ ಕೇರ್ ಎಂದು ಆಫರ್ ತಿರಸ್ಕರಿಸಿದ ರಾಹುಲ್ ಗಾಂಧಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat